ಬ್ರೇಕಿಂಗ್ ನ್ಯೂಸ್
06-08-24 06:40 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.6: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
1979ರಲ್ಲಿ ಮೈಸೂರು ತಾಲೂಕು ವರುಣಾದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ಮೈಸೂರಿನವರೇ ಆದ ದೂರುದಾರ ಸ್ನೇಹಮಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವಿ ಮಾಡಿದ್ದಾರೆ.
ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬೃಹತ್ ಮೈಸೂರು ಚಲೋ ಪಾದಯಾತ್ರೆಯು ಮದ್ದೂರು ತಲುಪಿತು. ಬಿಜೆಪಿ ಸಹಸ್ರಾರು ಸಂಖ್ಯೆಯಲ್ಲಿ ತೆರಳುತ್ತಿರುವ ನಮ್ಮ ಯಾತ್ರೆಯನ್ನು ಸ್ವಾಗತಿಸಿದ ಸಾರ್ವಜನಿಕ ಬಂಧುಗಳ ಬೆಂಬಲ ದುರಾಡಳಿತ ಅಂತ್ಯಗೊಳಿಸುವ ಸಂಕಲ್ಪಕ್ಕೆ ಸಾಕ್ಷಿಯಾಯಿತು.#MysuruChalo #BJPJDSPadayatre #ScamSarkara #ಮೈಸೂರುಚಲೋ… pic.twitter.com/0YknU4iX8C
— Vijayendra Yediyurappa (@BYVijayendra) August 6, 2024
Another complaint has been filed against Karnataka Chief Minister Siddaramaiah in the office of Governor Thaawarchand Gehlot in connection with the de-notification of a land case. RTI activist Snehamayi Krishna has filed the complaint through a registered post.
21-03-25 10:41 pm
HK News Desk
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
18 BJP MLAs suspended, assembly: ಸ್ಪೀಕರ್ ಪೀಠಕ...
21-03-25 05:46 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm