ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm