ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am