ಬ್ರೇಕಿಂಗ್ ನ್ಯೂಸ್
14-08-24 02:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಸರ್ಕಾರದಿಂದ ಇಡಲಾಗಿದ್ದ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸದೆ ವಂಚನೆ ಎಸಗಿರುವ ಎರಡು ಪ್ರಕರಣ ನೆಪದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಹಾಗೂ ಪಂಜಾಬ್ ನ್ಯಾಶನಲ್ ಬ್ಯಾಂಕ್ (ಪಿಎನ್ಬಿ)ಗಳಲ್ಲಿ ಇರಿಸಿರುವ ವಿವಿಧ ಇಲಾಖೆಗಳ ಎಲ್ಲ ಠೇವಣಿ ಮೊತ್ತಗಳನ್ನು ವಾಪಸ್ ಪಡೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಿದ್ದು, ಭವಿಷ್ಯದಲ್ಲಿ ಈ ಎರಡು ಬ್ಯಾಂಕ್ಗಳಲ್ಲಿ ಯಾವುದೇ ರೀತಿಯ ಠೇವಣಿ ಇಡದಂತೆ ಹಣಕಾಸು ಇಲಾಖೆಯಿಂದ ಎಲ್ಲ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.
ಇತ್ತೀಚೆಗೆ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಾಗೂ 2011 ಮತ್ತು 2013ರಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳನ್ನು ಉಲ್ಲೇಖಿಸಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಮಾಡಿದ್ದ ಶಿಫಾರಸಿನ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಹಣಕಾಸು ಇಲಾಖೆಯನ್ನೂ ಹೊಂದಿರುವ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಹಣಕಾಸು ಇಲಾಖೆಯ (ಆಯವ್ಯಯ ಮತ್ತು ಸಂಪನ್ಮೂಲ) ಕಾರ್ಯದರ್ಶಿ ಡಾ| ಪಿ.ಸಿ. ಜಾಫರ್ ಆದೇಶ ಹೊರಡಿಸಿದ್ದು, ಸೆ.9ರೊಳಗೆ ಈ ಬ್ಯಾಂಕ್ಗಳಲ್ಲಿ ಇರಿಸಿರುವ ಎಲ್ಲ ನಿಶ್ಚಿತ ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ ದೃಢೀಕರಣ ಹಾಗೂ ಖಾತೆಗಳ ವಿವರವನ್ನು ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ರಾಜ್ಯ ಸರಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮ -ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿ.ವಿ.ಗಳು ಹಾಗೂ ಸರಕಾರದ ಇನ್ನಿತರ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗುತ್ತದೆ. ಹೀಗಾಗಿ ಇಲಾಖೆಗಳು ತತ್ಕ್ಷಣದಿಂದಲೇ ಎಸ್ಬಿಐ ಹಾಗೂ ಪಿಎನ್ಬಿಗಳಲ್ಲಿ ಇಟ್ಟಿರುವ ನಿಶ್ಚಿತ ಠೇವಣಿಗಳನ್ನು ಮುಕ್ತಾಯಗೊಳಿಸಬೇಕಾಗುತ್ತದೆ. ಠೇವಣಿ ವಿವರ, ಶಾಖೆಗಳ ಸಂಖ್ಯೆ, ಖಾತೆಗಳ ಸಂಖ್ಯೆ, ಠೇವಣಿ ಮಾಡಿದ ಒಟ್ಟು ಹಣ ಇತ್ಯಾದಿ ಮಾಹಿತಿ ಹೇಗಿರಬೇಕೆಂಬ ಬಗ್ಗೆ ಹಣಕಾಸು ಇಲಾಖೆಯಿಂದ ಪ್ರತ್ಯೇಕ ನಮೂನೆಯನ್ನೂ ಸಿದ್ಧಪಡಿಸಲಾಗಿದ್ದು, ಅದನ್ನು ಎಲ್ಲ ಇಲಾಖೆಗಳಿಗೆ ರವಾನೆ ಮಾಡಲಾಗುತ್ತದೆ.
ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಮಾಹಿತಿ ನೀಡಿದ್ದು, ಪಿಎಸಿ ಶಿಫಾರಸು ಆಧರಿಸಿ ಹಣಕಾಸು ಇಲಾಖೆ ಈ ನಿರ್ಧಾರ ತೆಗೆದು ಕೊಂಡಿದೆ. ಬ್ಯಾಂಕ್ಗಳಲ್ಲಿ ಇಟ್ಟ ಸರಕಾರಿ ಹಣ ದುರ್ಬಳಕೆಯಾಗುವುದನ್ನು ತಪ್ಪಿಸಲು ಕಠಿನ ನಿರ್ಧಾರ ಅನಿವಾರ್ಯ. ಇಲಾಖೆಗಳ ಹೆಚ್ಚುವರಿ ಹಣವನ್ನು ಈ ರೀತಿ ನಿಶ್ಚಿತ ಠೇವಣಿ ರೂಪದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಮುಂದೆ ಈ ಸಂಬಂಧ ಟೆಂಡರ್ ಕರೆದು ಹೆಚ್ಚು ಬಡ್ಡಿ ನೀಡುವ ಬ್ಯಾಂಕ್ಗಳಲ್ಲಿ ಮಾತ್ರ ಠೇವಣಿ ಇಡಲಾಗುವುದು. ಪ್ರಕ್ರಿಯೆ ಈಗಷ್ಟೇ ಪ್ರಾರಂಭವಾಗಿದ್ದು ಮೊತ್ತ ಹಾಗೂ ಖಾತೆಗಳ ವಿವರ ಲಭ್ಯವಿಲ್ಲ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸುಧಾರಣಾ ಕ್ರಮ ಪ್ರಾರಂಭಿಸಿದೆ. ವಿವಿಧ ನಿಗಮಗಳ ಕಲ್ಯಾಣ ಯೋಜನೆಗಳಿಗೆ ಸಂಬಂಧಪಟ್ಟಂತೆ ಬ್ಯಾಂಕ್ನಲ್ಲಿ ಇಟ್ಟ ಹಣವನ್ನು ವಾಪಸ್ ಪಡೆಯಲಾಗುತ್ತಿದೆ. ಈ ಮೂಲಕ ಸುಮಾರು 2 ಸಾವಿರ ಕೋಟಿ ರೂ. ಹಣ ಸರ್ಕಾರಕ್ಕೆ ವಾಪಸ್ ಬರಲಿದೆ ಎಂದು ಅವರು ತಿಳಿಸಿದ್ದಾರೆ. ಆಮೂಲಕ ಹಣಕಾಸು ಮುಗ್ಗಟ್ಟಿನಲ್ಲಿರುವ ರಾಜ್ಯ ಸರ್ಕಾರ, ನಿಶ್ಚಿತ ಠೇವಣಿ ಮೊತ್ತಕ್ಕೂ ಕತ್ತರಿ ಹಾಕಲು ಮುಂದಾಗಿದ್ಯಾ ಎನ್ನುವ ಅನುಮಾನ ಮೂಡಿದೆ.
Karnataka CM instructs to withdraw Rs 2000 crore deposits from state government along with SBI, PNB Bank.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm