ಬ್ರೇಕಿಂಗ್ ನ್ಯೂಸ್
22-08-24 09:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್. 22: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇಡಿ ಅಧಿಕಾರಿಗಳು ಹಣ ವರ್ಗಾವಣೆಗೆ ಕಾರಣ ಎನ್ನಲಾದ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರೂ, ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿದ ರಾಜ್ಯದ ಸಿಐಡಿ ತನಿಖಾ ತಂಡ ನಾಗೇಂದ್ರ ಪಾತ್ರ ಇಲ್ಲವೆಂದು ಕ್ಲೀನ್ ಚಿಟ್ ನೀಡಿದೆ.
ವಾಲ್ಮಿಕಿ ನಿಗಮದ ಲೆಕ್ಕಪರಿಶೋಧಕ ಚಂದ್ರಶೇಖರ್ ಆತ್ಮಹತ್ಯೆಗೆ ಸಂಬಂಧಿಸಿ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು ಪ್ರಕರಣದಲ್ಲಿ ನಾಗೇಂದ್ರ ಹೆಸರನ್ನು ಕೈ ಬಿಟ್ಟಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆಗೆ ನಿಗಮದ ಎಂಡಿ ಪದ್ಮನಾಭ್ ಮತ್ತು ಪರುಶರಾಮ್ ಕಾರಣ ಎಂದು ಮಾತ್ರ ಉಲ್ಲೇಖಿಸಿದ್ದಾರೆ. ಇವರು ಆತ್ಮಹತ್ಯೆಗೆ ಪ್ರಚೋದನೆ ನೀಡಿ ಒತ್ತಡ ನೀಡಿದ್ದಾರೆ ಎಂದು ಇಬ್ಬರ ಹೆಸರು ಉಲ್ಲೇಖಿಸಿದ್ದಾರೆ. ನಿಗಮದ ಹಗರಣದಲ್ಲಿ ಒಂದಷ್ಟು ಹಣವನ್ನು ಚಂದ್ರಶೇಖರ್ ಪಡೆದಿರುವುದಾಗಿಯೂ ಉಲ್ಲೇಖಿಸಲಾಗಿದೆ.
ಪ್ರಕರಣ ಬೆಳಕಿಗೆ ಬಂದರೆ ತಾನೇ ಸಿಕ್ಕಿಬೀಳುವ ಭಯದಲ್ಲಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಇದಲ್ಲದೆ, ಪದ್ಮನಾಭ್ ಅವರು ಗೋವಾ ಮತ್ತು ಹೈದ್ರಾಬಾದ್ ಗೆ ಕರೆದುಕೊಂಡು ಹೋಗಿ ಒತ್ತಡ ಹಾಕಿದ್ದರು ಎಂದೂ ಉಲ್ಲೇಖಿಸಿದ್ದಾರೆ. ನೀನು ಹಣ ಪಡೆದಿದ್ದೀಯಾ, ಪ್ರಕರಣ ಬೆಳಕಿಗೆ ಬಂದ್ರೆ ನೀನೊಬ್ಬನೇ ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾನೇ ದೂರು ಕೊಡ್ತೀನಿ ಎಂದು ಚಂದ್ರಶೇಖರ್ಗೆ ಭಯ ಮೂಡಿಸಿದ್ದರು. ಹೀಗಾಗಿ ಪದ್ಮನಾಭ್ ಮತ್ತು ಪರುಶರಾಮ್ ಅವರೇ ಆತ್ಮಹತ್ಯೆಗೆ ಕಾರಣ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ 197 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಬಗ್ಗೆಯೂ ವಿಶೇಷ ತನಿಖಾ ತಂಡ ತನಿಖೆಯಲ್ಲಿ ತೊಡಗಿದೆ. ಸದ್ಯಕ್ಕೆ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ.
SIT givea clean chit to ex minister Nagendra in Valmiki multi crore scam.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm