ಬ್ರೇಕಿಂಗ್ ನ್ಯೂಸ್
26-08-24 04:11 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಇದರ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಏಳು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು ಮುಂದೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು.
ಪ್ರಸ್ತುತ ದರ್ಶನ್ ರಾಜಾತಿಥ್ಯ ಎನ್ನುವ ಸುದ್ದಿ ಹಬ್ಬಿದ್ದರಿಂದ ಏಳು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್ ಶರಣಬಸವ ಅಮೀನಗಡ, ಪ್ರಭು ಎಸ್ ಕಂದೇವಾಲ್, ತಿಪ್ಪೇಸ್ವಾಮಿ, ಶ್ರೀಕಾಂತ್, ವೆಂಕಪ್ಪ ಕೊರ್ತಿ, ಸಂಪತ್ ಕುಮಾರ್ ಕಡಪಟ್ಟಿ, ಬಸಪ್ಪ ತೇಲಿ ಅವರನ್ನು ಅಮಾನತು ಮಾಡಿದ್ದೇವೆ. ಘಟನೆ ಸಂಬಂಧ ವರದಿಯನ್ನು ಕೇಳಲಾಗಿದೆ. ಮೇಲಧಿಕಾರಿಗಳು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದರೆ ಅವರನ್ನೂ ಅಮಾನತು ಮಾಡಲಾಗುವುದು. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಇದರಲ್ಲಿ ಯಾವುದೇ ಮುಲಾಜು ಇಲ್ಲ. ಇದರಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿ ಎಂಬ ತಾರತಮ್ಯ ಮಾಡಲ್ಲ ಎಂದು ತಿಳಿಸಿದರು.
ಜೈಲಿನಲ್ಲಿ ಈಗಾಗಲೇ ಜಾಮರ್ ಅಳವಡಿಸಲಾಗಿದೆ. ಆದರೆ, ಇದರ ಪ್ರೀಕ್ವೆನ್ಸಿ ಜಾಸ್ತಿ ಇದ್ದರೆ ಅಕ್ಕಪಕ್ಕದ ನಿವಾಸಿಗರಿಗೆ ತೊಂದರೆ ಆಗುತ್ತದೆ ಎಂದು ಪ್ರೀಕ್ವೆನ್ಸಿ ಕಡಿಮೆ ಮಾಡಿದ್ದೇವೆ. ಈವಾಗ ದರ್ಶನ್ ಟೀ ಕುಡಿಯುವ ಹಾಗೂ ಸಿಗರೇಟು ಸೇದುವ ಫೋಟೋ ಯಾರು ತೆಗೆದರು? ಮೊಬೈಲ್ ಜೈಲಿನ ಒಳಗಡೆ ಹೇಗೆ ಹೋಯಿತು? ಯಾವ ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.
ಕಾರಾಗೃಹದಲ್ಲಿ 24/7 ಸಿಸಿ ಟಿವಿ ಇರುತ್ತದೆ. ಯಾವ ಯಾವ ಬ್ಯಾರಕ್ನಲ್ಲಿ ಏನು ನಡೆಯುತ್ತದೆ ಎಂಬುದು ಸಿಸಿಟಿವಿಯಲ್ಲಿ ಕಾಣುತ್ತದೆ. ಹೀಗಿದ್ದರೂ ಕ್ರಮ ಕೈಗೊಳ್ಳದೆ ಇದ್ದರೆ ಅಂತವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸದ್ಯ ಜೈಲಿನಲ್ಲಿ ನಟ ದರ್ಶನ್, ಅದೇ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಬೆಂಗಳೂರಿನ ನಟೋರಿಯಸ್ ರೌಡಿ ವಿಲ್ಸನ್ ನಾಗನ ಜೊತೆಗೆ ಆರಾಮದಲ್ಲಿ ಕುಳಿತು ಚಹಾ ಸೇವಿಸುತ್ತ ಸಿಗರೇಟು ಸೇದುತ್ತಿರುವ ಫೋಟೊ ಎರಡು ದಿನಗಳ ಹಿಂದೆ ವೈರಲ್ ಆಗಿತ್ತು. ಅಲ್ಲದೆ, ರೌಡಿಯ ಮಗನ ಜೊತೆಗೆ ದರ್ಶನ್ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡ ಹೊರಬಂದಿತ್ತು. ಈ ಹಿನ್ನೆಲೆಯಲ್ಲಿ ಜೈಲಿನ ಸಿಬಂದಿ ಮತ್ತು ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.
The Karnataka government has suspended seven officials of Bengaluru's Parappana Agrahara Central Prison after a probe into a viral photograph and video showing Kannada actor Darshan Thoogudeepa receiving what appears to be special treatment while in custody. The action came a day after a purported photo of Darshan smoking a cigarette in jail premises went viral on social media.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm