ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm