ಬ್ರೇಕಿಂಗ್ ನ್ಯೂಸ್
31-08-24 06:33 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಾಗಿ ಹೈಕೋರ್ಟಿನಲ್ಲಿ ವಾದ- ಪ್ರತಿವಾದ ಮುಂದುವರಿದಿದ್ದು ಸೆ.2ರ ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಸಿಎಂ ಸಿದ್ಧರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದವನ್ನು ಮುಂಡಿಸಿದರು.
ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು ದೂರುದಾರ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾದವಗಿ ಶನಿವಾರ ವಾದ ಮಂಡಿಸಿದರು. ಆರೋಪಿಗಳಿಗೆ ನೋಟಿಸ್ ನೀಡಿ ತನಿಖೆಗೆ ಅವಕಾಶ ನೀಡಬಾರದು. ನೋಟಿಸ್ ನೀಡಿದರೆ ತನಿಖೆಯೇ ಪೂರ್ವಗ್ರಾಹಕ್ಕೀಡಾಗಲಿದೆ. 17ಎ ಪ್ರಕಾರ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಲು ಅವಕಾಶವಿಲ್ಲ. ಎಫ್ಐಆರ್ ದಾಖಲಾದ ಬಳಿಕವಷ್ಟೇ ಆರೋಪಿಗೆ ಪ್ರಶ್ನಿಸುವ ಹಕ್ಕು ಬರಲಿದೆ ಎಂದು ವಾದಿಸಿದರು.
ಸಂವಿಧಾನದ 163ರಡಿ ಮುಖ್ಯಮಂತ್ರಿಯೂ ಕ್ಯಾಬಿನೆಟ್ ಭಾಗವಾಗಿರುತ್ತಾರೆ. ಸಿಎಂ ಹೊರತಾದ ಕ್ಯಾಬಿನೆಟ್ ಇರಲು ಸಾಧ್ಯವಿಲ್ಲ. ಹೀಗಾಗಿ ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸಬೇಕಿಲ್ಲ ಎಂದು ಹೇಳಿದರಲ್ಲದೆ, ಆರ್.ಎಸ್ ನಾಯಕ್ ಪ್ರಕರಣ ಮುಂದಿಟ್ಟು ಕೋರ್ಟ್ ಗಮನಸೆಳೆದರು. ಒಂದೆಡೆ ಅಕ್ರಮವೇ ಆಗಿಲ್ಲ ಎನ್ನುತ್ತಲೇ ನಿವೃತ್ತ ನ್ಯಾಯಮೂರ್ತಿ ಹಾಗೂ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಮುಡಾ ಹಗರಣದ ತನಿಖೆಗೆ ಸಮಿತಿ ರಚಿಸಿದ್ದಾರೆ. ಇದನ್ನೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡುವ ಸಂದರ್ಭದಲ್ಲಿ ಉಲ್ಲೇಖಿಸಿದ್ದಾಗಿ ತಿಳಿಸಿದ್ದಾರೆ.
ದೂರುದಾರ ಟಿಜೆ ಅಬ್ರಾಹಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದ ನಡೆಸಿದರು. ಮುಡಾ ಸೈಟ್ ಹಂಚಿಕೆಗಾಗಿ ಡಿನೋಟಿಫಿಕೇಷನ್ ಆದಾಗ ಸಿದ್ಧರಾಮಯ್ಯ ಅವರು ಡಿಸಿಎಂ ಆಗಿದ್ದರು. ಭೂ ಪರಿವರ್ತನೆ ಆದಾಗಲೂ ಸಿದ್ಧರಾಮಯ್ಯ ಅವರೇ ಡಿಸಿಎಂ ಆಗಿದ್ದರು. 50-50 ಸೈಟ್ ಹಂಚಿಕೆ ಮಾಡುವಂತೆ ಕೇಳಿದಾಗ ಸಿದ್ಧರಾಮಯ್ಯ ಅವರು ಸಿಎಂ ಆಗಿದ್ದರು ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. 25-10-2021ರಲ್ಲಿ 50:50 ನಿವೇಶನ ಹಂಚಿಕೆಗೆ ಮನವಿ ಮಾಡಲಾಗಿದೆ. ಸಿಎಂ ಪುತ್ರ ಉಪಸ್ಥಿತಿಯ ಮುಡಾ ಸಭೆಯಲ್ಲೇ ಸೈಟ್ ಹಂಚಿಕೆಗೆ ಒಪ್ಪಿಗೆ ನೀಡಲಾಗಿದೆ. ದಿನಾಂಕ 25-11-2021ರಂದು 50:50 ರಂತೆ ಸೈಟ್ ಹಕ್ಕು ಬಿಡುಗಡೆ ಮಾಡಲಾಗಿದೆ. ಆನಂತರ ಸಿಎಂ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಯಾವುದೇ ಜಮೀನು ಕಳೆದುಕೊಳ್ಳದೇ ಸಿಎಂ ಪತ್ನಿಗೆ ಸೈಟ್ ಹಂಚಿಕೆ ಮಾಡಲಾಗಿದೆ ಎಂಬುದಾಗಿ ವಕೀಲ ರಂಗನಾಥ್ ನ್ಯಾಯಪೀಠಕ್ಕೆ ತಿಳಿಸಿದರು. ಅಂತಿಮವಾಗಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 2ರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.
The Karnataka High Court on Monday adjourned the hearing on a petition challenging the Governor's sanction to prosecute Chief Minister Siddaramaiah in the MUDA scam case and adjourned it to Monday, September 2. Senior advocate Abhishek Manu Singhvi, appearing for Chief Minister Siddaramaiah, argued the case.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm