ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm