ಬ್ರೇಕಿಂಗ್ ನ್ಯೂಸ್
09-09-24 10:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ನಾಲ್ವರು ಆರೋಪಿಗಳ ವಿರುದ್ಧ ಬೆಂಗಳೂರಿನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮುಸಾವೀರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹ, ಮಾಜ್ ಮುನೀರ್ ಅಹ್ಮದ್, ಮುಝಮ್ಮಿಲ್ ಷರೀಫ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಗೆ ಸಂಬಂಧಿತ ಸೆಕ್ಷನ್ಗಳಡಿ ಆರೋಪಪಟ್ಟಿ ಸಲ್ಲಿಸಲಾಗಿದೆ.
ಮಾರ್ಚ್ 1ರಂದು ಮಧ್ಯಾಹ್ನ ವೈಟ್ ಫೀಲ್ಡ್ ಬಳಿಯ ರಾಮೇಶ್ವರಂ ಕೆಫೆ ಹೊಟೇಲ್ ನಲ್ಲಿ ಸ್ಫೋಟ ಘಟನೆ ನಡೆದಿತ್ತು. ಮುಸಾವೀರ್ ಹುಸೇನ್ ಸುಧಾರಿತ ಸ್ಫೋಟಕ ವಸ್ತುವಿದ್ದ ಬ್ಯಾಗ್ ಅನ್ನು ಹೋಟೆಲ್ ಒಳಗಿರಿಸಿ ಪರಾರಿಯಾಗಿದ್ದ. ಬಾಂಬ್ ಸ್ಪೋಟದಿಂದ ಹೋಟೆಲ್ನಲ್ಲಿದ್ದ 10 ಮಂದಿ ಗಾಯಗೊಂಡಿದ್ದರು. ತನಿಖೆ ಎತ್ತಿಕೊಂಡ ಎನ್ಐಎ ತಂಡ ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದಾರು ರಾಜ್ಯಗಳ 29 ಸ್ಥಳಗಳಲ್ಲಿ ಹುಡುಕಾಟ ನಡೆಸಿತ್ತು. ಆರಂಭದಲ್ಲಿ ಯಾವುದೇ ಸುಳಿವೂ ಸಿಕ್ಕಿರದ ಕಾರಣ ನಾನಾ ರೀತಿಯ ಶಂಕೆಗೂ ಸುದ್ದಿ ಕಾರಣವಾಗಿತ್ತು. ಸ್ಫೋಟದ 42 ದಿನಗಳ ನಂತರ ಏಪ್ರಿಲ್ 12ರಂದು ಎನ್ಐಎ ಇಬ್ಬರು ಪ್ರಮುಖ ಆರೋಪಿಗಳು ಮತ್ತು ಸಂಚಿನ ರೂವಾರಿಗಳಾದ ಅಬ್ದುಲ್ ಮತೀನ್ ಅಹಮದ್ ತಾಹ ಮತ್ತು ಮುಸೀರ್ ಹುಸೇನ್ ಶಾಜೀಬ್ ಎಂಬವರನ್ನು ಬಂಧಿಸಿತ್ತು.
ಆರೋಪಿಗಳು ಹಿಂದುಗಳ ಹೆಸರಲ್ಲಿ ವಿವಿಧ ರಾಜ್ಯಗಳ ಹೋಟೆಲ್ಗಳಲ್ಲಿ ತಲೆಮರೆಸಿಕೊಳ್ಳುತ್ತಿದ್ದರು. ಇವರು ಸಿಕ್ಕಿಬೀಳದಿರುತ್ತಿದ್ದರೆ ಬಾಂಗ್ಲಾದೇಶಕ್ಕೆ ಪಲಾಯನ ಆಗುತ್ತಿದ್ದರು. ಇವರ ಜೊತೆಗೆ ಜೈಲಿನಲ್ಲಿದ್ದ ಮಾಜ್ ಮುನೀರ್ ಅಹಮದ್ ಮತ್ತು ಮುಜಾಮಿಲ್ ಶರೀಫ್ ಅವರನ್ನೂ ಪ್ರಕರಣದಲ್ಲಿ ಆರೋಪಿಸಲಾಗಿದೆ.
2020ರಿಂದಲೂ ತಲೆಮರೆಸಿಕೊಂಡಿದ್ದ ಅಬ್ದುಲ್ ಮತೀನ್ ಮತ್ತು ಮುಸೀರ್ ಹುಸೇನ್ ಐಸಿಸ್ ಉಗ್ರ ಸಂಘಟನೆಯ ಸದಸ್ಯರಾಗಿದ್ದರು. ಸಿರಿಯಾ ದೇಶದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿಯೂ ಇವರು ಭಾಗಿಯಾಗಿದ್ದರು ಎಂದು ಎನ್ಐಎ ಆರೋಪ ಪಟ್ಟಿಯಲ್ಲಿ ತಿಳಿಸಿದೆ. ಇವರು ಅನೇಕ ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆ ಸೇರಲು ಪ್ರೇರೇಪಿಸುತ್ತಿದ್ದರು. ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಷರೀಫ್ ಐಸಿಸ್ ಸೇರ್ಪಡೆಯಾಗಲು ಇವರೇ ಕಾರಣರಾಗಿದ್ದರು. ತಾಹಾ ಮತ್ತು ಶಾಜೀಬ್ ಇಬ್ಬರೂ ಡಾರ್ಕ್ ವೆಬ್ನಿಂದ ಡೌನ್ ಲೋಡ್ ಮಾಡಿಕೊಂಡ ದಾಖಲೆಗಳ ಮೂಲಕ ಭಾರತದ ಸಿಮ್ ಕಾರ್ಡ್, ಬ್ಯಾಂಕ್ ಅಕೌಂಟ್ ಮತ್ತು ಬಾಂಗ್ಲಾದೇಶದ ಗುರುತಿನ ಚೀಟಿಗಳನ್ನು ಹೊಂದಿದ್ದರು. ಇವರಿಗೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣದ ನೆರವು ಸಿಗುತ್ತಿತ್ತು.
ವಿಧ್ವಂಸಕ ಕೃತ್ಯ ಎಸಗಬೇಕೆಂಬ ಐಸಿಸ್ ಉಗ್ರರ ಸೂಚನೆಯಂತೆ, ಬೆಂಗಳೂರಿನಲ್ಲಿ ಸ್ಫೋಟ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆದ ಜನವರಿ 22 ರಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯನ್ನು ಸ್ಫೋಟಿಸಲು ಸಂಚು ಹೂಡಿದ್ದರು. ಅದು ವಿಫಲಗೊಂಡಿದ್ದರಿಂದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಮುಂದಾಗಿದ್ದರು ಎಂದು ಎನ್ಐಎ ಆರೋಪ ಪಟ್ಟಿಯಲ್ಲಿ ತಿಳಿಸಿದೆ.
The National Investigation Agency (NIA) on Monday filed a chargesheet against four accused in connection with the blast at the Rameshwaram Cafe here on March 1. The chargesheet mentioned that the accused planned to carry out an IED blast at the Karnataka BJP headquarters on the day of Pran Pratishtha ceremony (January 22) of Ram Lalla in Ayodhya but failed to do so.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm