ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm