ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm