ಬ್ರೇಕಿಂಗ್ ನ್ಯೂಸ್
27-09-24 05:07 pm HK News Desk ಕರ್ನಾಟಕ
ಬೆಂಗಳೂರು, ಸೆ.27: ಮುಡಾ ನಿವೇಶನ ಅಕ್ರಮ ಪ್ರಕರಣ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ಸಿದ್ದರಾಮಯ್ಯ ವಿರುದ್ಧ IPC 120B, 166, 403, 406, 420, 426, 465, 468, 340, 351 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ ನೀಡಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೆಕ್ಷನ್ 9 ಮತ್ತು 13 ರ ಅಡಿ ಕೇಸ್, ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 & 54 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚಿಸಿತ್ತು. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಸೂಚಿಸಿತ್ತು. ಅದೇ ಪ್ರಕಾರ, ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ ವನ್ ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ A 3, ಭೂಮಾಲೀಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.
Lokayukta police here on Friday registered a First Information Report (FIR) against Chief Minister Siddaramaiah and others in the Mysuru Urban Development Authority (MUDA) site allotment case, following the court order, official sources said.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm