ಬ್ರೇಕಿಂಗ್ ನ್ಯೂಸ್
30-09-24 02:42 pm HK News Desk ಕರ್ನಾಟಕ
ಮಂಡ್ಯ, ಸೆ 30: ನಿಂತಿದ್ದ ಕಂಟೈನರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸ್ಯಾಂಜೋ ಆಸ್ಪತ್ರೆ ಬಳಿ ಇಂದು ಬೆಳಗ್ಗೆ ನಡೆಯಿತು.
ಕುಣಿಗಲ್-ಹೆಬ್ಬರು-ತುಮಕೂರು ನಡುವೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಂಟೈನರ್ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿರುವುದರಿಂದ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಯಾಂಜೋ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕುಣಿಗಲ್ನಿಂದ ಬೆಂಗಳೂರ - ಮೈಸೂರು ಹೆದ್ದಾರಿಯಲ್ಲಿ ಬಂದ ಬಸ್ ಸ್ಯಾಂಜೋ ಆಸ್ಪತ್ರೆಯ ಬಳಿ ಸರ್ವಿಸ್ ರಸ್ತೆಗೆ ತಿರುವು ತೆಗೆದುಕೊಳ್ಳುವಾಗ ರಸ್ತೆ ಬದಿ ನಿಂತಿದ್ದ ಕಂಟೈನರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಹೊರ ಬರಲಾಗದೇ ಕಿಟಕಿಗಳಿಂದ ಹೊರಬಂದಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ, ತೆರವು ಕಾರ್ಯ ನಡೆಸಿದರು.
Mandya KSRTC bus rams over parked container truck, 20 passengers Injured.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 01:05 pm
Udupi Correspondent
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
02-09-25 11:22 am
Mangalore Correspondent
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm