ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm