ಬ್ರೇಕಿಂಗ್ ನ್ಯೂಸ್
04-10-24 12:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಉಪಾಧ್ಯಕ್ಷರಾಗಿದ್ದ ವಿಜಯ್ ಟಾಟಾ ಎಂಬವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
Vijay Tata, JD(S) social media vice president, has lodged a complaint against Union Minister HD Kumaraswamy and MLC Ramesh Gowda at Amruthahalli Police Station in Bengaluru, reported ANI. He alleged that they demanded ₹50 Crores from him and issued life threats. The JD(S) leader also sought police protection in the wake of threats mentioned in his complaint.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm