ಬ್ರೇಕಿಂಗ್ ನ್ಯೂಸ್
16-10-24 05:08 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಮಸೀದಿ ಆವರಣದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ಮಾತ್ರಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೇಳಿರುವ ಹೈಕೋರ್ಟ್, ಈ ಕುರಿತು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಪಡಿಸಿದೆ.
ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದ ಕೋರ್ಟ್, ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ. ತಮ್ಮ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ಹಾಗೂ ಸಳೀಯ ಜೆಎಂಎಫ್ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿನ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ 2024ರ ಸೆಪ್ಟೆಂಬರ್ 24ರಂದು ರಾತ್ರಿ ಸುಮಾರು 10.50ರ ಸಮಯಕ್ಕೆ ಬಂದು ಜೈಶ್ರೀರಾಮ್ ಘೋಷಣೆ ಕೂಗಿದ ಮತ್ತು ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದರೆಂದು ಆರೋಪಿಸಿ ಕೇಸು ದಾಖಲಾಗಿತ್ತು.
ಪ್ರಕರಣವನ್ನು ಪುತ್ತೂರು ಜೆಎಂಎಫ್ ಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗಲೇ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ದೂರುದಾರರು ನೆಲೆಸಿರುವ ಭಾಗದಲ್ಲಿ ಹಿಂದೂ- ಮುಸ್ಲಿಮರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿರುವುದಾಗಿ ದೂರಿನಲ್ಲಿಯೇ ಹೇಳಲಾಗಿದೆ. ಆದರೆ, ಅರ್ಜಿದಾರರ ವಿರುದ್ಧ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಆರೋಪದಲ್ಲಿ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 295ಎ ಪ್ರಕಾರ ಉದ್ದೇಶಪೂರ್ವಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಕೆರಳಿಸುವುದು ಅಪರಾಧ ಕೃತ್ಯವಾಗುತ್ತದೆ.
ಯಾರಾದರೂ ‘ಜೈಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಪ್ರಕರಣದ ವಿಚಾರಣೆ ಮುಂದುವರಿಸಲು ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಆಗುತ್ತದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
Quashing a case against two men accused of an offence under IPC Section 295A for allegedly shouting 'Jai Sriram' in a mosque, the Karnataka High Court said it was not understandable how the slogan would outrage the religious feelings of any class.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm