ಬ್ರೇಕಿಂಗ್ ನ್ಯೂಸ್
04-11-24 08:29 pm HK News Desk ಕರ್ನಾಟಕ
ವಿಜಯಪುರ, ನ.4: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. ಆದರೆ 1954-55 ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಇಲ್ಲಿ ಯಾವುದೇ ಜಮೀನು ವಕ್ಪ್ ನದ್ದು ಆಗುವುದಕ್ಕೆ ಸಾಧ್ಯವಿಲ್ಲ. ಇಲ್ಲಿನ ಮಠಗಳಿಗೆ ಚಾಲುಕ್ಯರು, ಹೊಯ್ಸಳರು, ಕಿತ್ತೂರು ರಾಣಿ ಚೆನ್ನಮ್ಮ ಜಮೀನು ಕೊಟ್ಟದ್ದು. ಆದರೆ, ಇಂಥವನ್ನೂ ಜಮೀರ್ ಖಾನ್ ವಕ್ಪ್ ಮಾಡಿ ನೋಟಿಸ್ ಕೊಡಿಸಿದ್ದಾರೆ. ಒಂದು ರೀತಿಯಲ್ಲಿ ಮುಸ್ಲಿಮರ ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರೋಕೆ ಸಿದ್ದರಾಮಯ್ಯ ಹಾಗೂ ಜಮೀರ್ ಹೊರಟಿದ್ದಾರೆ. ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ. ರಾಜ್ಯದಲ್ಲಿ ಹಲವಾರು ದೇವಸ್ಥಾನಗಳು ವಕ್ಪ್ ಎಂದಾಗಿವೆ. ಇದರ ಹಿಂದೆ ಯಾವ ರೀತಿಯ ಷಡ್ಯಂತ್ರ ಇದೆಯೆಂದು ಅರ್ಥವಾಗುತ್ತದೆ ಎಂದು ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿಯನ್ನು ವಕ್ಪ್ ಅಡಿಯಲ್ಲಿ ತರಲು ಹೊರಟಿದ್ದಾರೆ. ಕಾನೂನು ಬಾಹಿರವಾಗಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ. ಇವರು ಯಾವ ಕಾನೂನು ಅಡಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ ಎಂದು ಹೇಳಬೇಕಾಗಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು, ಪಹಣಿಯಲ್ಲಿ ನಮೂದಾಗಿರುವ ವಕ್ಪ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಹೇಳಿದ ಶೋಭಾ, ಉಡುಪಿಯ ಕೃಷ್ಣ ಮಠದ ಮುಂಭಾಗದಿಂದ ಶಿವಳ್ಳಿ ಎಂಬ ಗ್ರಾಮದ ವರೆಗೆ ಸುಲ್ತಾನಪುರ ಎಂದು ದಿಶಾಂಕ ಆ್ಯಪ್ ನಲ್ಲಿ ತೋರಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಮನೆ ಮಾಡಿದೆ ಎಂದರು.
ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕಗಳು ವಕ್ಪ್ ಅಡಿಯಲ್ಲಿವೆ. ಇದು ಬದಲಾವಣೆ ಆಗಬೇಕು. ವಿಜಯಪುರದ ಡಿಸಿ, ಎಸ್ಪಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಇತರೇ ದೇವಸ್ಥಾನಗಳು ಕೂಡ ವಕ್ಪ್ ಭೂಮಿ ಎಂದಾಗಿವೆ. ದಾನದ ಮೂಲಕ ವಕ್ಪ್ ಗೆ ಬರಬೇಕು, ಆದರೆ ಇವೆಲ್ಲಾ ಹೇಗೆ ವಕ್ಪ್ ಎಂದಾದವು. 1974 ರ ಗೆಜೆಟ್ ನೊಟಿಫಿಕೇಷನ್ ಸಂಪೂರ್ಣ ರದ್ದಾಗಬೇಕು. ಇದು ರದ್ದಾಗೋ ವರೆಗೂ ಹೋರಾಟ ಮಾಡುತ್ತೇವೆ ಎಂದರು.
There was no waqf in Ambedkar constitution, Hoysalas, Chalukyas gave land to monasteries slams Shobha Karandlaje in vijaypur.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm