ಬ್ರೇಕಿಂಗ್ ನ್ಯೂಸ್
06-11-24 02:34 pm Bangalore Correspondent ಕರ್ನಾಟಕ
ಬೆಂಗಳೂರು, ನ.6: ವಕ್ಫ್ ವಿವಾದ ಭುಗಿಲೇಳಲು ಕಾರಣವಾದ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದು ನಿಂತಿದ್ದು ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಇದರೊಂದಿಗೆ ಜಮೀರ್ ಅಹ್ಮದ್ ಖಾನ್ ಪ್ರತಿ ಪಕ್ಷಗಳ ಜೊತೆಗೆ ಸ್ವಪಕ್ಷೀಯರ ಕೆಂಗಣ್ಣಿಗೂ ಗುರಿಯಾಗಿದ್ದಾರೆ.
ಈಗಾಗಲೇ ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್ ಅವರನ್ನೇ ಗುರಿಯಾಗಿಸಿದ್ದಾರೆ. ಇತ್ತ ಆಡಳಿತ ಪಕ್ಷದ ಒಳಗೂ ಜಮೀರ್ ವಿರುದ್ಧ ಮೇಲ್ವರ್ಗದ ಶಾಸಕರು, ಉಪ ಚುನಾವಣೆ ಟಾಸ್ಕ್ ಹೊತ್ತಿರುವ ಸಚಿವರಿಂದ ತೀವ್ರ ಬೇಸರ ವ್ಯಕ್ತವಾಗಿದೆ.
ವಕ್ಫ್ ವಿವಾದದಿಂದ ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷಕ್ಕೆ ರಾಜಕೀಯ ಅಸ್ತ್ರ ಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಕ್ಫ್ ವಿವಾದಕ್ಕೆಲ್ಲ ಜಮೀರ್ ಅಹ್ಮದ್ ವಿಜಯಪುರದಲ್ಲಿ ರೈತರಿಗೆ ನೋಟಿಸ್ ನೀಡಿದ್ದೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸದ್ಯ ಉಪ ಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ತಾನೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಜಮೀರ್ ಅವರನ್ನೇ ಎಲ್ಲ ಕಡೆಯೂ ಟಾರ್ಗೆಟ್ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಈ ರೀತಿ ಆಗಿರುವುದು ಕೋಮು ಧ್ರುವೀಕರಣಕ್ಕೆ ಕಾರಣವಾಗುತ್ತಿದೆ ಎಂಬ ಬೇಸರ ಕಾಂಗ್ರೆಸ್ ಶಾಸಕರದ್ದು.
ಕಾಂಗ್ರೆಸ್ ಶಾಸಕರ ಪತ್ರದಲ್ಲೇನಿದೆ?
ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ. ಶಿಗ್ಗಾವಿ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ ಗೊಂದಲ ಸೃಷ್ಟಿ ಮಾಡಿದ್ದರು. ನಮ್ಮಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಶಾಸಕರಿದ್ದಾರೆ, ಆದರೆ ಜಮೀರ್ ಮಾತ್ರ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ. ಜಮೀರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಮಲ್ಲಿಕಾರ್ಜುನ ಖರ್ಗೆಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಉಲ್ಲೇಖಿಸಿದ್ದಾರೆ.
Waqf row, congress leaders turn against Zameer Ahmed Khan, file compaint to KPCC president.He is giving a statement that will cause embarrassment to the party. This is seriously damaging the authority of the government. Shiggavi had created unnecessary confusion as a candidate.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm