ಬ್ರೇಕಿಂಗ್ ನ್ಯೂಸ್
12-11-24 03:12 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹನ್ನೊಂದು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಅಧಿಕಾರಿಗಳಿಗೆ ಸಂಬಂಧಿತ ದಾಖಲೆಗಳು, ಆಸ್ತಿ, ಬೆಲೆಬಾಳುವ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆಗೆ ದಾಳಿಯಾಗಿದೆ. ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬವರ ಬೆಳಗಾವಿ ನಿವಾಸದ ಮೇಲೆ ದಾಳಿ ನಡೆದಿದೆ. ವೆಂಕಟೇಶ್ ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆ ಹಾಕಲಾಗಿದೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪ ವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದ್ದು, 14 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ.
ರಾಣೆಬೆನ್ನೂರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿರುವ ಜ್ಯೋತಿ ಶಿಗ್ಲಿ ಅವರ ಮನೆಗೆ ದಾಳಿಯಾಗಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
Karnataka Lokayukta on Tuesday morning launched surprise raids on nine government officials in different parts of the state. The simultaneous raids are underway in as many as 40 locations belonging to the suspects, officials said.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm