ಬ್ರೇಕಿಂಗ್ ನ್ಯೂಸ್
12-11-24 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮ್ ಗುತ್ತಿಗೆದಾರರಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ನೀಡುವಂತೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.
1 ಕೋಟಿ ರೂ. ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ. 4 ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು ಇದಕ್ಕೆ ಅನುಮತಿ ನೀಡಿರುವ ಸಿಎಂ ಸಿದ್ದರಾಮಯ್ಯ ಕಾನೂನು ತಿದ್ದುಪಡಿಗೆ ಸೂಚನೆ ನೀಡಿದ್ದಾರೆ.
ಮುಂದಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಈಗಾಗಲೇ ಎಸ್ಸಿ, ಎಸ್ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ 24ರ ಮೀಸಲಾತಿ ನೀಡಿರುವ ಸರ್ಕಾರ, ಒಬಿಸಿ ಸಮುದಾಯಕ್ಕೆ ಶೇ. 4 ಮೀಸಲಾತಿ ನೀಡಿದೆ. 2A ಅಡಿ ಗುತ್ತಿಗೆಯಲ್ಲಿ ಶೇ. 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ. 43ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.
ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದು ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್.ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕಿಸ್ ಬಾನು ಸಹಿ ಮಾಡಿದ್ದರು.
The Siddaramaiah administration is examining a proposal to provide reservation to Muslims in public contracts for construction (civil) works up to Rs 1 crore. If the proposal is greenlighted, Karnataka will have a 47 per cent quota in government tenders. Politically, this is being seen as Chief Minister Siddaramaiah’s push to consolidate the Ahinda (minorities, backward classes and Dalits) grouping.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm