ಬ್ರೇಕಿಂಗ್ ನ್ಯೂಸ್
15-11-24 03:45 pm Bangalore Correspondent ಕರ್ನಾಟಕ
ಬೆಂಗಳೂರು, ನ.15: ಬಿಜೆಪಿ ಶಾಸಕ ಮುನಿರತ್ನ ಅವರ ಹನಿಟ್ರ್ಯಾಪ್ ಪ್ರಕರಣದಲ್ಲಿ ವಿಷಯ ಗೊತ್ತಿದ್ದರೂ ಮುಚ್ಚಿಟ್ಟು ಅಕ್ರಮಕ್ಕೆ ಸಹಕಾರ ನೀಡಿದ್ದ ಆರೋಪದಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ ತನಿಖಾ ದಳ (ಎಸ್ ಐಟಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯಲಾಗಿದೆ.
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಆಬಳಿಕ ಷರತ್ತಿನ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಐಯಣ್ಣ ರೆಡ್ಡಿ, ಇದಕ್ಕೂ ಹಿಂದೆ ಮುನಿರತ್ನ ಅವರ ರಾಜರಾಜೇಶ್ವರಿ ಕ್ಷೇತ್ರ ವ್ಯಾಪ್ತಿಯ ರಾಜಗೋಪಾಲ ನಗರ, ಯಶವಂತಪುರ ಮತ್ತು ಪೀಣ್ಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದರು. ಮುನಿರತ್ನ ನಡೆಸುತ್ತಿದ್ದ ಹನಿಟ್ರ್ಯಾಪ್ ಗೆ ಐಯಣ್ಣ ರೆಡ್ಡಿ ಸಹಕಾರ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ನೀಡಲು ಸಂಚು ರೂಪಿಸಿದ್ದ ಸಂಗತಿ ತಿಳಿದಿದ್ದರೂ ಇನ್ ಸ್ಪೆಕ್ಟರ್ ರಹಸ್ಯ ಕಾಪಾಡಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.
ಪ್ರಕರಣದ ಸಂತ್ರಸ್ತೆ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ಅವರನ್ನು ಕೆಲವು ದಿನಗಳ ಹಿಂದೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಇನ್ ಸ್ಪೆಕ್ಟರ್ ಒಳಸಂಚಿನ ಬಗ್ಗೆ ಮಾಹಿತಿ ನೀಡಿದ್ದರು. ಇದರಂತೆ, ಐಯಣ್ಣ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
A Bengaluru police inspector was arrested on Thursday by the Special Investigation Team (SIT) for allegedly assisting rape suspect BJP MLA Munirathna in multiple ‘criminal conspiracies.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm