ಬ್ರೇಕಿಂಗ್ ನ್ಯೂಸ್
17-11-24 03:01 pm Bangalore Correspondent ಕರ್ನಾಟಕ
ಬೆಂಗಳೂರು, ನ,17: ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯ ಖಾಲಿ ಪ್ರದೇಶದಲ್ಲಿ ಕಾರಿನ ಒಳಗೆ ಕುಳಿತು ಬೆಂಕಿಹಚ್ಚಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್ (42) ಆತ್ಮಹತ್ಯೆ ಮಾಡಿಕೊಂಡವರು.
ಶನಿವಾರ ಮಧ್ಯಾಹ್ನದ ವೇಳೆ ತಮ್ಮ ಸ್ಕೋಡಾ ಕಾರಿನಲ್ಲಿ ಬಂದಿದ್ದ ಪ್ರದೀಪ್ ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಸಂಪೂರ್ಣ ಭಸ್ಮವಾಗಿದೆ. ಮೃತದೇಹವು ಗುರುತಿಸಲಾರದಷ್ಟು ಸುಟ್ಟು ಹೋಗಿತ್ತು. ಕಾರು ಸಂಚರಿಸಿದ್ದ ಮಾರ್ಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧರಿಸಿ ಗುರುತು ಪತ್ತೆ ಮಾಡಲಾಯಿತು ಎಂದು ಪೊಲೀಸರು ಹೇಳಿದರು.
ಹೋಟೆಲ್ ಉದ್ಯಮದಲ್ಲಿ ಪ್ರದೀಪ್ ನಷ್ಟ ಅನುಭವಿಸಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಹೇಳಲಾಗಿದ್ದು, ನಿಖರ ಕಾರಣ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
'ಮುದ್ದಿನಪಾಳ್ಯಕ್ಕೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಕೋಡಾ ಕಾರಿನಲ್ಲಿ ಪ್ರದೀಪ್ ಬಂದಿದ್ದರು. ಕೆಲ ಸಮಯ ಕಾರಿನಲ್ಲೇ ಕುಳಿತಿದ್ದರು. ಅದಾದ ಮೇಲೆ ಕಾರು ಹೊತ್ತಿ ಉರಿಯಲು ಆರಂಭಿಸಿತ್ತು. ಸಮೀಪದ ಮನೆಯವರು ಕಾರಿಗೆ ಬೆಂಕಿ ಬಿದ್ದಿರುವುದನ್ನು ಗಮನಿಸಿ, ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಬಂದಾಗ ಮಧ್ಯಾಹ್ನ 2.45 ಆಗಿತ್ತು. ಆ ವೇಳೆಗೆ ಕಾರು ಬಹುತೇಕ ಭಸ್ಮವಾಗಿತ್ತು. ಬೆಂಕಿ ನಂದಿಸಿದ ನಂತರ ಪರಿಶೀಲನೆ ನಡೆಸಿದಾಗ ಕಾರಿನ ಒಳಗೆ ಮೃತದೇಹ ಪತ್ತೆಯಾಗಿತ್ತು' ಎಂದು ಮೂಲಗಳು ತಿಳಿಸಿವೆ.
ಪೆಟ್ರೋಲ್ ಖರೀದಿ:
ಆತ್ಮಹತ್ಯೆ ಮಾಡಿ ಕೊಳ್ಳಲು ಉದ್ಯಮಿ ಪೆಟ್ರೋಲ್ ಖರೀದಿಸಿ ಬಾಟಲಿಯಲ್ಲಿ ತುಂಬಿಕೊಂಡು ಬಂದಿದ್ದರು ಎನ್ನಲಾಗಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಘಟನೆಯ ಸಂಪೂರ್ಣ ದೃಶ್ಯ ಅಕ್ಕಪಕ್ಕದ ಮನೆಗಳಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ' ಎಂದು ಪೊಲೀಸರು ಹೇಳಿದರು.
ದೆಹಲಿ ನೋಂದಣಿ ಸಂಖ್ಯೆಯ ಸ್ಕೋಡಾ ಕಾರನ್ನು ಪ್ರದೀಪ್ ಅವರು ಇತ್ತೀಚೆಗಷ್ಟೇ ಖರೀದಿಸಿದ್ದರು. ಮಾಲೀಕತ್ವ ಇನ್ನೂ ಬದಲಾವಣೆ ಆಗಿರಲಿಲ್ಲ ಎಂದು ಮೂಲಗಳು ಹೇಳಿವೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
A 42-year-old businessman was found dead in his car after it was set on fire in a remote area of Bengaluru's Muddinpalya Saturday evening, police said.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm