ಬ್ರೇಕಿಂಗ್ ನ್ಯೂಸ್
24-11-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ನ.24: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನೆರವು ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ 25,413 ಮತಗಳ ಅಂತರದಿಂದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಈ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ ಡಿಎ ಸೇರಿತ್ತು. ಒಂದು ವೇಳೆ ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಮಗೆ ಬೆಂಬಲ ನೀಡಿರದಿದ್ದರೆ, ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರುತ್ತಿರಲಿಲ್ಲ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂತ ಅಶ್ವಥ್ ನಾರಾಯಣ್ ಹೇಳಿಲ್ವಾ, ಇದರ ಅರ್ಥ ಏನು? ಎಂದು ಪ್ರಶ್ನಿಸಿದ ಡಿಸಿಎಂ ಡಿಕೆಶಿ, ಕ್ಷೇತ್ರ ಖಾಲಿ ಆದಾಗಿನಿಂದ ಸಾಕಷ್ಟು ಪ್ರವಾಸ ಮಾಡಿದೀವಿ. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ದೆವೋ ಅದನ್ನ ಮೊದಲು ಜಾರಿ ಮಾಡಬೇಕು. ನಾನು ಯೋಗೇಶ್ವರ್ ಕೂತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡುತ್ತೇವೆ ಎಂದು ಭರವಸೆ ನೀಡಿದರು.
ವಿಧಾನಸಭೆಯಲ್ಲಿ 19 ಸ್ಥಾನಗಳನ್ನು ಹೊಂದಿದ್ದ ಜೆಡಿಎಸ್ ಈಗ 18ಕ್ಕೆ ಕುಸಿದಿದೆ ಎಂದು ವ್ಯಂಗ್ಯವಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಸಿ.ಪಿ ಯೋಗೀಶ್ವರ್ ಪರ ಜನರ ತೀರ್ಪು ಇದಾಗಿದೆ ಎಂದು ಹೇಳಿದರು.
ಈ ಮಧ್ಯೆ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನಡುವೆ ತಂದಿಕ್ಕುವ ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮ ನಡುವೆ ಕೆರಳಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದರು. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಸೋಲಿಗೆ ಯಾರು ಹೊಣೆ? ಅದು ಕಾಂಗ್ರೆಸ್ ಅಲ್ಲವೇ? ಸಿದ್ದರಾಮಯ್ಯ ಅಲ್ಲವೇ? ಅದನ್ನು ಡಿಕೆ ಶಿವಕುಮಾರ್ ಒಪ್ಪಿಕೊಳ್ಳುತ್ತಾರೆಯೇ? ಅವರು ಒಪ್ಪಿಕೊಂಡರೆ ಅದರ ಬಗ್ಗೆ ಮಾತನಾಡುತ್ತೇನೆ ಅಶೋಕ್ ಹೇಳಿದರು.
Karnataka Deputy Chief Minister D K Shivakumar on Sunday hinted at cracks and squabbling within the BJP and the JD(S), as he gave credit to the leaders of these parties for the defeat of JD(S) candidate Nikhil Kumaraswamy in the Channapatna assembly bypoll.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm