ಬ್ರೇಕಿಂಗ್ ನ್ಯೂಸ್
29-11-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ನ.29: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಿತ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ, ನಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯಸಂಹಿತೆ 299ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.
ಚಂದ್ರಶೇಖರ ಸ್ವಾಮೀಜಿಗಳ ಹೇಳಿಕೆ ಕುರಿತಂತೆ ಎಚ್.ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ತನ್ನ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಎಚ್ಚೆತ್ತ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದರು.
ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದರು.
An FIR has been registered against Chandrasekhar Swamiji of the Vishwa Okkaligara Mahasansthan Math for his controversial statement suggesting that Muslims should be denied voting rights and that the Waqf Board should be abolished.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm