ಬ್ರೇಕಿಂಗ್ ನ್ಯೂಸ್
06-12-24 08:22 pm HK News Desk ಕರ್ನಾಟಕ
ಹುಬ್ಬಳ್ಳಿ: "ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ. ಇತ್ತ ಡಿಸಿಎಂ ಡಿಕೆಶಿ ಫೆವಿಕಾಲ್ ಕಿತ್ತು ತೆಗೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಬಿಜೆಪಿ ಸಂಸದ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಎಲ್ಲವನ್ನೂ ಇವರಿಬ್ಬರೇ ಮಾಡಿದರೆ, ನಮ್ಮದೇನು ಪಾತ್ರ ಎನ್ನುವ ಆತಂಕ ಗೃಹ ಸಚಿವರಿಗಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ. ಯಾವ ಪುರುಷಾರ್ಥಕ್ಕೆ ಹಾಸನದಲ್ಲಿ ಸಮಾವೇಶ ಮಾಡಿದರು?. ಜನಕಲ್ಯಾಣ ಮಾಡಲಿ ಅಂತ ಜನ ಅಧಿಕಾರ ಕೊಟ್ಟರೆ, ಕಾಂಗ್ರೆಸ್ ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ಇವರು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಜೀರೋ ಸರ್ಕಾರ. ಅಭಿವೃದ್ಧಿಯಲ್ಲಿ, ಸಾಮಾಜಿಕ ನ್ಯಾಯಾಲಯದಲ್ಲಿ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ, ಎಲ್ಲದರಲ್ಲೂ ಜೀರೋ. ಹಣಕಾಸಿನ ದಿವಾಳಿ ಮಾಡಿ, ಅಭಿವೃದ್ಧಿ ಶೂನ್ಯವಾಗಿದೆ" ಎಂದರು.
"ಕಾಂಗ್ರೆಸ್ ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಮಾಡುತ್ತಿದೆ. ಕೋರ್ಟ್ನಲ್ಲಿ ನಡೆಯುತ್ತಿರುವ ಕೇಸ್ ಮೇಲೆ ಪ್ರಭಾವ ಬೀರಲು ಸರ್ಕಾರಿ ದುಡ್ಡಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಅದೇ ದುಡ್ಡನ್ನು ಅಭಿವೃದ್ಧಿಗೆ ಬಳಕೆ ಮಾಡಬಹುದಿತ್ತು. ನಿಮಗೆ ಆನೆ ಬಲ ತುಂಬಿಕೊಳ್ಳುವುದಲ್ಲ. ಜನರಿಗೆ ಆನೆ ಬಲ ತುಂಬುವ ಕೆಲಸ ಆಗಬೇಕಿದೆ. ಅಸ್ಥಿರತೆಯಲ್ಲಿ ಸಿದ್ದರಾಮಯ್ಯ ಕಾಲ ದೂಡುತ್ತಿದ್ದಾರೆ" ಎಂದು ದೂರಿದರು.
ವಕ್ಫ್ ವಿರುದ್ಧ ಬಿಜೆಪಿ ಹೋರಾಟ ನಾಟಕ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಅವರು, "ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ. ವಿರೋಧ ಪಕ್ಷವಾಗಿ ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವುದು ನಮ್ಮ ಕೆಲಸ. ಸಿಎಂಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ" ಎಂದರು.
ಕೇಂದ್ರದಿಂದ 10 ಕೆ.ಜಿ ಅಕ್ಕಿ ಕೊಟ್ಟಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, "10 ಕೆಜಿ ಕೊಡುತ್ತಿದ್ದೇವೆ ಅಂತ ನಾವೆಲ್ಲೂ ಹೇಳಿಲ್ಲ. ಕಾಂಗ್ರೆಸ್ನವರೇ 10 ಕೆ.ಜಿ ಕೊಡುವುದಾಗಿ ಹೇಳಿದ್ದರು. ಆದರೆ ಒಂದಗಳು ಅಕ್ಕಿಯನ್ನೂ ರಾಜ್ಯ ಸರ್ಕಾರ ಕೊಡುತ್ತಿಲ್ಲ. ಕೇಂದ್ರ ಅಕ್ಕಿ ಕೊಡುತ್ತಿದೆ ಅಂತ ಹೇಳಲು ಇವರಿಗೆ ನಾಚಿಕೆ" ಎಂದು ಹೇಳಿದರು
CM Siddaramaiah sat like Fevicol on CM seat says Bommai in Hubballi on the other hand DK shivakumar is been waiting to sit in the CM thrown
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm