ಬ್ರೇಕಿಂಗ್ ನ್ಯೂಸ್
10-12-24 11:48 am Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಿದೆ.
ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಡಿ.11ರ ಬುಧವಾರ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿ ನಡೆಯಲಿದ್ದು ಅವರ ಗೌರವಾರ್ಥ ರಾಜ್ಯದಲ್ಲಿ ಒಂದು ದಿನ ಎಲ್ಲ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರಂತೆ, ಎಲ್ಲ ಮಾದರಿಯ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಖಾಸಗಿ, ಅನುದಾನಿತ ಶಾಲಾ ಕಾಲೇಜುಗಳಿಗೆ ಡಿ.11ರಂದು ರಜೆ ನೀಡಲಾಗಿದೆ.

ಇದಲ್ಲದೆ, ಡಿ.10ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಇರಲಿದ್ದು ಇದರ ಅಂಗವಾಗಿ ಈ ಅವಧಿಯಲ್ಲಿ ಎಲ್ಲ ರಾಜ್ಯ ಸರ್ಕಾರದ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸುವುದು ಮತ್ತು ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಬಗ್ಗೆ ಸರ್ಕಾರದ ಉಪ ಕಾರ್ಯದರ್ಶಿ ಎಲಿಷಾ ಆಂಡ್ರೂಸ್ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮತ್ತು ಎಸ್ಸೆಂ ಕೃಷ್ಣ ಕೊನೆಗಾಲದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದರಿಂದ ಅವರ ನಿಧನಕ್ಕೆ ಶೋಕಾಚರಣೆ ಮಾಡುತ್ತಾರೆಯೇ ಎಂಬ ಬಗ್ಗೆ ಸಂಶಯ ಇತ್ತು. ಸಿದ್ದರಾಮಯ್ಯ ಸರ್ಕಾರ ಅದರ ಬಗ್ಗೆ ತಾರತಮ್ಯ ಮಾಡದೆ ಶೋಕಾಚರಣೆ ಘೋಷಣೆ ಮಾಡಿದೆ. ಆದೇಶ ಪ್ರಕಾರ, ಬೆಳಗಾವಿ ಅಧಿವೇಶನಕ್ಕೂ ಕತ್ತರಿ ಬೀಳಲಿದೆ. ಸ್ಪೀಕರ್ ಯುಟಿ ಖಾದರ್ ಅವರ ಆಪ್ತ ಕಾರ್ಯದರ್ಶಿಯನ್ನು ಸಂಪರ್ಕಿಸಿದಾಗ, ಡಿ.11ರ ಒಂದು ದಿನ ಮಾತ್ರ ಅಧಿವೇಶನಕ್ಕೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ.
The Karnataka government will observe three days of mourning following the death of former Chief Minister SM Krishna, who passed away at the age of 92 due to prolonged illness. His last rites will be conducted with full state honours, and no functions or celebrations will be held during this period.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm