ಬ್ರೇಕಿಂಗ್ ನ್ಯೂಸ್
11-12-24 07:28 pm HK News Desk ಕರ್ನಾಟಕ
ಮಂಡ್ಯ, ಡಿ 11: ನಿನ್ನೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಇಹಲೋಕ ತ್ಯಜಿಸಿದ್ದಾರೆ. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಯಿತು.
ಪಂಚಭೂತಗಳಲ್ಲಿ ಲೀನವಾದ ಎಸ್ಎಂಕೆ
ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಂತ್ಯಕ್ರಿಯೆಯ ಸಾಂಪ್ರಾದಾಯಿಕ ವಿಧಿವಿಧಾನ ಕಾರ್ಯ ನಡೆಯಿತು. ಮೊದಲು ಪುಣ್ಯಾಹ, ಬಳಿಕ ಪಂಚಗವ್ಯ, ಸ್ನಾನ, ಸ್ನಾನದ ಬಳಿಕ ಕರ್ಣ ಮಂತ್ರ ಪಾರಾಯಣ, ಉತ್ಕ್ರಾಂತ ತಿಲಪಾತ್ರ ದಾನ, ಗೋದಾನ, ದಶದಾನ ಮಾಡಲಾಯಿತು. ಆ ಬಳಿಕ ಪಾರ್ಥೀವ ಶರೀರಕ್ಕೆ ಮೊಮ್ಮಗ ಅಮೃರ್ತ್ಯ ಹೆಗಡೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಎಸ್ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾದರು.
ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ.
ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ
ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅವರ ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ ನಡೆಸಲಾಯಿತು. ಈತ ಬೇರೆಯಾರೂ ಅಲ್ಲ ಉದ್ಯಮಿ ಸಿದ್ದಾರ್ಥ ಅವರ ಪುತ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯನೇ ಅಮಾರ್ಥ್ಯ ಹೆಗ್ಡೆ.
ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದ ಕೃಷ್ಣ
ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
The mortal remains of former chief minister S M Krishna, who passed away due to an illness in Bengaluru, on Tuesday, was brought to his native Somanahalli, in Maddur taluk, Mandya district, on Wednesday afternoon.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm