ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm