ಬ್ರೇಕಿಂಗ್ ನ್ಯೂಸ್
21-12-24 09:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.21: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಬಳಿಯ ಟಿ ಬೇಗೂರಿನಲ್ಲಿ ಶನಿವಾರ ಭೀಕರ ಅಫಘಾತ ಸಂಭವಿಸಿದ್ದು, ಕೋಟಿ ಬೆಲೆಯ ಐಷಾರಾಮಿ ವೋಲ್ವೋ ಕಾರಿನಲ್ಲಿದ್ದ ಸಾಫ್ಟ್ವೇರ್ ಉದ್ಯಮಿ ಸಹಿತ ಕುಟುಂಬದ ಎಲ್ಲ ಆರು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಉದ್ಯಮಿ ಕುಟುಂಬ ಸದಸ್ಯರು ಬೆಂಗಳೂರಿನಿಂದ ತುಮಕೂರು ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಇವರ ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ. ಕಂಟೇನರ್ ಪಲ್ಟಿಯಾಗಿದ್ದರಿಂದ ಕಾರು ರಸ್ತೆಯಲ್ಲೇ ಅಪ್ಪಚ್ಚಿಯಾಗಿದೆ. ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಲಾರಿ ತನ್ನ ಎದುರಿಗಿದ್ದ ವಾಹನಕ್ಕೆ ಗುದ್ದಿ ಪಲ್ಟಿಯಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಮೂಲದ ಇಂಜಿನಿಯರ್ ಆಗಿರುವ ಚಂದ್ರಮ್ ಅವರ ಸಾಂಗ್ಲಿ ಜಿಲ್ಲೆಯ ಜತ್ ಗ್ರಾಮದ ಇಡೀ ಕುಟುಂಬ ಸ್ಥಳದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಉದ್ಯಮಿ ಚಂದ್ರಂ ಯೆಗಪಗೋಳ್ (48), 16 ವರ್ಷದ ಜಾನ್, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, 36 ವರ್ಷದ ವಿಜಯಲಕ್ಷ್ಮಿ, 42 ವರ್ಷದ ಗೌರಬಾಯಿ ಮೃತ ದುರ್ದೈವಿಗಳು. ಐಎಎಸ್ಟಿ ಸಲ್ಯೂಷನ್ ಎನ್ನುವ ಸಾಫ್ಟ್ವೇರ್ ಕಂಪನಿಯನ್ನು ಚಂದ್ರಮ್ ನಡೆಸುತ್ತಿದ್ದರು.
ಬೆಂಗಳೂರಿನಲ್ಲಿ ನೆಲೆಸಿದ್ದ ಇವರ ಕುಟುಂಬ ಕ್ರಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುಮಾರು 10 ಕಿಲೋ ಮೀಟರ್ ವರೆಗೂ ಸಂಚಾರಕ್ಕೆ ಅಡ್ಡಿಯಾಗಿತ್ತು.
Six persons, including two children travelling in an VOLVO SUV, died in a freak accident after a container truck toppled and fell on the SUV near Nelamangala on Saturday morning.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm