ಬ್ರೇಕಿಂಗ್ ನ್ಯೂಸ್
25-12-24 12:46 pm HK News Desk ಕರ್ನಾಟಕ
ಬಾಗಲಕೋಟೆ/ಬೆಳಗಾವಿ, ಡಿ 25: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು.
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ ತಾಲೂಕಿನ ಪಂತನಗರದ ಯೋಧ ದಯಾನಂದ ತಿರಕಣ್ಣವರ (44) ಹಾಗೂ ಕುಂದಾಪುರದ ಅನೂಪ್ ಎಂಬವರೂ ಕೂಡ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹೇಶ್ ಮರಿಗೊಂಡ ಅವರು 11ನೇ ಮರಾಠಾ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೈನಿಕರನ್ನು ಹೊತ್ತ ವಾಹನವು ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.
ಸಿಎಂ ಸಂತಾಪ:
ಈ ಬಗ್ಗೆ ಮುಖ್ಯಮಂತ್ರಿಗಳು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ''ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ'' ಎಂದಿದ್ದಾರೆ.
Five soldiers died after an army vehicle fell into a gorge in Jammu and Kashmir's Poonch on Tuesday. Of them, three -- Dayanand Thirakannavara, Anoop and Mahesh Marigonda -- were from Karnataka.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm