ಬ್ರೇಕಿಂಗ್ ನ್ಯೂಸ್
27-12-24 11:24 am Bangalore Correspondent ಕರ್ನಾಟಕ
ಬೆಂಗಳೂರು, ಡಿ.27: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಡಿ.27ರ ಶುಕ್ರವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಅಲ್ಲದೆ, ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಇದರಂತೆ, ರಾಜ್ಯಾದ್ಯಂತ ಇಂದು ಶಾಲೆ, ಕಾಲೇಜುಗಳಿಗೆ ರಜೆ ಇರಲಿದೆ. ಬ್ಯಾಂಕ್ ಸಹಿತ ಎಲ್ಲ ಸರ್ಕಾರಿ ಕಚೇರಿಗಳು ಮುಚ್ಚಲಿವೆ. ಇದಲ್ಲದೆ, ಮೂರು ದಿನಗಳ ಕಾಲ ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳಲ್ಲಿ ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸಲು ಸೂಚಿಸಲಾಗಿದೆ. ಡಿ.27ರಿಂದ ಜನವರಿ 1ರ ವರೆಗೆ ಶೋಕಾಚರಣೆ ಇರಲಿದ್ದು ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಸರ್ಕಾರದ ಉಪ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶ ಪ್ರಕಾರ, ಹೊಸ ವರ್ಷ ಪ್ರಯುಕ್ತ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ಮನೋರಂಜನಾ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಗಳೆಲ್ಲ ರದ್ದಾಗಲಿವೆ. ಮೈಸೂರು ಅರಮನೆ ಆವರಣದದಲ್ಲಿ ಡಿ.31ರ ರಾತ್ರಿ ಆಯೋಜನೆಗೊಂಡ ಸಂಗೀತ ಕಾರ್ಯಕ್ರಮ, ಪಟಾಕಿ ಸಿಡಿಸುವ ಸಂಭ್ರಮ ನಡೆಯುವುದಿಲ್ಲ. ಮಂಗಳೂರಿನಲ್ಲಿ ಕರಾವಳಿ ಉತ್ಸವ ಪ್ರಯುಕ್ತ ಏರ್ಪಡಿಸಿರುವ ಮನೋರಂಜನಾ ಕಾರ್ಯಕ್ರಮ ರದ್ದಾಗಲಿವೆ. ಉಳಿದಂತೆ, ಇತರೇ ವ್ಯಾಪಾರ ಚಟುವಟಿಕೆ ಮುಂದುವರಿಯಲಿದೆ. ಖಾಸಗಿಯಾಗಿ ನಡೆಸುವ ಕಾರ್ಯಕ್ರಮಗಳಿಗೆ ಇದರಿಂದ ತೊಂದರೆ ಆಗುವುದಿಲ್ಲ.
ಕ್ರಿಸ್ಮಸ್ ಮತ್ತು ಹೊಸ ವರ್ಷದ ಅಂಗವಾಗಿ ಅನೇಕರು ಪ್ರವಾಸದಲ್ಲಿದ್ದು ಪ್ರವಾಸಿ ತಾಣದಲ್ಲಿ ಭಾರೀ ಜನಸಂದಣಿ ಏರ್ಪಟ್ಟಿದೆ. ಈ ನಡುವೆ ಶುಕ್ರವಾರವೂ ಸರ್ಕಾರಿ ರಜೆ ಘೋಷಣೆ ಆಗಿರುವುದರಿಂದ ಸತತ ಮೂರು ದಿನಗಳ ರಚನೆಯಿಂದಾಗಿ ಉದ್ಯೋಗಸ್ಥರು ಪ್ರವಾಸ ಹೊರಡಲು ಮುಂದಾಗಿದ್ದಾರೆ.
ಬೀಚ್ ಉತ್ಸವ ಮುಂದೂಡಿಕೆ
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Manmohan Singh death, Mangalore beach festival has been postponed. The beach festival was being organised as a part of the month-long Karavali Utsava. The next date for the beach festival will be announced shortly, said the district administration.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm