ಬ್ರೇಕಿಂಗ್ ನ್ಯೂಸ್
05-01-25 07:36 pm HK News Desk ಕರ್ನಾಟಕ
ಮೈಸೂರು, ಜ.5: ಕಾಂಗ್ರೆಸ್ ಅವಧಿಯಲ್ಲಿ ಲಂಚ ಶೇ.60 ತಲುಪಿದೆ. ಇದನ್ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ. ವಿಧಾನಸೌಧ ಒಳಗಡೆಯೇ ಸಚಿವರು ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮನೆ ಹಂಚಿಕೆಯಲ್ಲೂ ಲಂಚ ಪಡೆಯಲಾಗುತ್ತಿದೆ. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದ, ಈಗ ವಿಧಾನಸೌಧಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ. ಸತ್ಯಮೇವಾ ಜಯತೇ ಎಂಬಂತೆ ಸಿದ್ದರಾಮಯ್ಯ ನಡೆದುಕೊಳ್ಳುತ್ತಿದ್ದಾರಾ? ಅವರ ಆತ್ಮಕ್ಕೆ ಅವರು ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನ ನೋಡಿದ್ರೆ ಹಿಂದಿನ ಬಿಜೆಪಿ ಸರ್ಕಾರವೇ ಚೆನ್ನಾಗಿತ್ತು ಎನ್ನುತ್ತಿದ್ದಾರೆ ಕಾಂಗ್ರೆಸ್ ಪರ ಗುತ್ತಿಗೆದಾರರು. ಇದಕ್ಕೆಲ್ಲಾ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಬೆಲೆ ತರಬೇಕಾಗುತ್ತದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕೆ ಭವಿಷ್ಯ ನುಡಿದರು.
ಬಸ್ ದರ ಶೇ 15 ರಷ್ಟು ಏರಿಕೆ ವಿಚಾರದ ಪ್ರಶ್ನೆಗೆ, ಸರ್ಕಾರ ಗ್ಯಾರೆಂಟಿಯನ್ನ ನಿಲ್ಲಿಸಲು ಕಾರಣವನ್ನ ಹುಡುಕುತ್ತಿದೆ. ಹೇಗಾದರು ಮಾಡಿ ಗ್ಯಾರೆಂಟಿ ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ನಿಲ್ಲಿಸಬೇಡಿ. ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಆಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಅವರಿಂದಲೇ ಕಿತ್ತು ಅವರಿಗೆ ಕೊಡುವ ಕೆಲಸವನ್ನ ಸರ್ಕಾರ ಮಾಡಬಾರದು. ಮಧ್ಯಮ ವರ್ಗದ ಜನರ ಬದುಕಿನ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅತ್ತೆಯದನ್ನ ಅಳಿಯ ದಾನ ಮಾಡಿದ ಅನ್ನೋ ಮಾತಿನಂತೆ ಅವರಿಂದ ಕಿತ್ತು ಇವರಿಗೆ ಕೊಡೋಕೆ ಇವರೇ ಆಗಬೇಕಾ.. ಎಂದು ಸಾರಿಗೆ ದರ ಏರಿಕೆ ಬಗ್ಗೆ ಕುಮಾರಸ್ವಾಮಿ ಕುಹಕವಾಡಿದ್ದಾರೆ.
ಜನಸಾಮಾನ್ಯರಿಗೆ ಇದು ಹೊರಯಾಗಲಿದೆ. ಯಾವುದೇ ಮಂತ್ರಿ ಮಕ್ಕಳು, ಶಾಸಕರ ಮಕ್ಕಳು ಬಸ್ ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಿಗೆಯಾದ್ರು ಅದು ಅವರಿಗೆ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕೆ ಹೇಳಿದರು.
Bribery has reached 60% during the Congress term. This has been admitted by Congress party workers. Union Minister H.D. Kumaraswamy has dropped a new bombshell, saying that ministers are taking bribes inside the Vidhan Soudha itself.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm