ಬ್ರೇಕಿಂಗ್ ನ್ಯೂಸ್
06-01-25 02:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಇಬ್ಬರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಎಂವಿ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಲಹಾಬಾದ್ ಮೂಲದ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿ ಅನೂಪ್ ಕೆಲಸ ಮಾಡುತ್ತಿದ್ದರು.
ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಅನೂಪ್ ಮನೆಯಲ್ಲಿ ಮೂರು ಜನ ಮನೆ ಕೆಲಸ ಮಾಡುತ್ತಿದ್ದರು. ಮೊದಲ ಮಗುವಿಗೆ ಮಾನಸಿಕ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು.
ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗ್ಬೇಕು ಬೇಗ ಮನೆಗೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನ ಕರೆಸಿಕೊಂಡಿದ್ದರು.
ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆ ಕೆಲಸ ಮಾಡುತಿದ್ರು, ಇನ್ನೊಬರು ಮಗು ನೋಡಿಕೊಳ್ಳುತ್ತಿದ್ರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ ಇತ್ತು. ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು. ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ಪೊಲೀಸರಿಗೆ ತಿಳಿಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಸದಾಶಿವನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.
A 38-year-old software engineer along with his wife ended their lives after allegedly killing their minor children aged five and two years at their residence in RMV 2nd stage in Bengaluru on January 6.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 12:35 pm
Mangalore Correspondent
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm