ಬ್ರೇಕಿಂಗ್ ನ್ಯೂಸ್
08-01-25 11:43 am Bangalore Correspondent ಕರ್ನಾಟಕ
ಬೆಂಗಳೂರು, ಜ 07: ಎಚ್ಎಂಪಿವಿ ವೈರಾಣುವಿನ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
'ಇದು ಆತಂಕಾರಿಯಾದ ವೈರಸ್ ಅಲ್ಲ':
ಗಾಂಧಿಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಇದು ಆತಂಕಾರಿಯಾದ ವೈರಸ್ ಅಲ್ಲ. ಅದು ಚೀನಾದಿಂದ ಬಂದಿಲ್ಲ. 2001ರಿಂದಲೇ ಈ ವೈರಾಣು ಪತ್ತೆಯಾಗಿದೆ. ಎಚ್ಎಂಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದರೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ ಎಂದು ತಿಳಿಸಿದರು.

ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ;
ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು.
ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಸರಕಾರ ನಿಗಮಗಳಿಗೆ 446 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ ಕೇವಲ 260 ಕೋಟಿ ರೂ.ಗಳನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಖರ್ಚು ಮಾಡಲಾಗಿದೆ. ಶೀಘ್ರದಲ್ಲೇ ಹಣಕಾಸು ವರ್ಷ ಮುಗಿಯಲಿದೆ. 2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದುವರೆಗೆ 3,631 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ ರೂ., ಭೋವಿ ನಿಗಮದಲ್ಲಿ 107 ಕೋಟಿ ರೂ. ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡಿಲ್ಲ. ಈ ಸಂಬಂಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆಗಳಿಗೆ ನೋಟಿಸ್ ನೀಡಿ, ಅಗತ್ಯ ಬಿದ್ದರೆ ಅಮಾನತು ಮಾಡಿ ಎಂದು ಖಡಕ್ ಸೂಚನೆ ನೀಡಿದರು.
ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು. ಇದರಿಂದ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
There is no need for the public to fear the Human Metapneumovirus (HMPV), said Karnataka Chief Minister Siddaramaiah, appealing to people to remain vigilant. The Health Department has already issued guidelines, he underlined.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm