ಬ್ರೇಕಿಂಗ್ ನ್ಯೂಸ್
08-01-25 09:26 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ವಿಕ್ರಂಗೌಡ ಎನ್ಕೌಂಟರ್ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ 6 ಮಂದಿ ನಕ್ಸಲರು ಕಡೆಗೂ ಶಸ್ತ್ರಾಸ್ತ್ರವನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದಾರೆ. ಶರಣಾಗತಿ ಸಮಿತಿ ಮತ್ತು ಶಾಂತಿಗಾಗಿ ನಾಗರಿಕ ಸಮಿತಿ ಸತತ ಪ್ರಯತ್ನದ ಬಳಿಕ ನಕ್ಸಲರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಸರ್ಕಾರದ ಮುಂದೆ ಶರಣಾಗಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಕ್ಸಲರಾದ ಮುಂಡುಗಾರು ಲತಾ, ವನಜಾಕ್ಷಿ, ಸುಂದರಿ, ಮಾರಪ್ಪ ಅರೋಳಿ, ವಸಂತ್ ಹಾಗೂ ಎನ್.ಜೀಶಾ ಇವರು ಸುದೀರ್ಘ ಕಾಲದ ಕಾಡಿನ ಜೀವನ ಬಿಟ್ಟು ಶರಣಾಗತಿ ಆಗಿದ್ದಾರೆ. ಶರಣಾಗತಿಯಾದ ನಕ್ಸಲರಿಗೆ ಸರ್ಕಾರ ಭರ್ಜರಿ ಪ್ಯಾಕೇಜ್ ಕೂಡ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗತಿ ಎಂದೇ ಹೇಳಲಾಗಿತ್ತು. ಅದರಂತೆ ಬಿಗು ಬಂದೋಬಸ್ತ್ ಕೂಡ ಮಾಡಲಾಗಿತ್ತು. ಆದರೆ ಶೃಂಗೇರಿ ಬಳಿಯ ಕಾಡಿನಿಂದ ಪೊಲೀಸ್ ಭದ್ರತೆಯೊಂದಿಗೆ ಹೊರಟ ನಕ್ಸಲರನ್ನು ಹಾಸನ ಮೂಲಕ ನೇರವಾಗಿ ಬೆಂಗಳೂರಿಗೆ ಒಯ್ಯಲಾಯಿತು. ಮುಖ್ಯಮಂತ್ರಿ ಸೂಚನೆಯಂತೆ ಪೊಲೀಸರು ಈ ಕ್ರಮ ಅನುಸರಿಸಿದ್ದಾರೆಂದು ಹೇಳಲಾಗುತ್ತಿದೆ.
ಕಾನೂನಾತ್ಮಕ ಮುಂದಿನ ಪ್ರಕ್ರಿಯೆ ಏನೇನು?
ಶರಣಾದರೂ ನಕ್ಸಲರ ವಿರುದ್ಧ ದಾಖಲಾದ ಪ್ರಕರಣಗಳು ಮುಕ್ತಗೊಳ್ಳುವುದಿಲ್ಲ. ಪೊಲೀಸರ ಮೇಲಿನ ದಾಳಿ, ನಾಗರಿಕರ ಹತ್ಯೆಯಂತಹ ಘೋರ ಅಪರಾಧಗಳ ಕಾನೂನು ಪ್ರಕ್ರಿಯೆ ನ್ಯಾಯಾಲಯದಲ್ಲಿ ಯಥಾವತ್ ಮುಂದುವರಿಯುತ್ತವೆ. ಆದರೆ ರಾಜ್ಯ ಸರ್ಕಾರ ಸೂಕ್ತ ಕಾರ್ಯ ವಿಧಾನಗಳ ಮೂಲಕ ಶರಣಾದ ನಕ್ಸಲರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಂಪಡೆಯಲು ಪರಿಗಣಿಸಬಹುದು. ಶರಣಾದ ನಕ್ಸಲರಿಗೆ ಉಚಿತ ಕಾನೂನು ಸಹಕಾರ ನೀಡಲು ವಕೀಲರನ್ನು ಒದಗಿಸಬಹುದು. ಅಲ್ಲದೆ ತ್ವರಿತ ವಿಚಾರಣೆಗಾಗಿ ತ್ವರಿತಗತಿ ನ್ಯಾಯಾಲಯ ರಚನೆ ಮಾಡಲು ಸರ್ಕಾರಕ್ಕೆ ಅವಕಾಶ ಇದೆ.
ನಕ್ಸಲ್ ಶರಣಾಗತಿ ನಿಯಮಾವಳಿ ಪ್ರಕಾರ ಶರಣಾಗತರಾದ ನಕ್ಸಲರು ತನ್ನ ನಿಜವಾದ ಹೆಸರು, ಗುರುತು, ಚಟುವಟಿಕೆ, ಕ್ರಿಯಾಶೀಲವಾಗಿದ್ದ ಸಂಘಟನೆಯ ಹೆಸರು, ಶಸ್ತ್ರಾಸ್ತ್ರ ಸರಬರಾಜು ಮೂಲದ ಬಗ್ಗೆ ಮಾಹಿತಿ ನೀಡಬೇಕು. ಅಲ್ಲದೆ ಸಂಘಟನೆಗೆ ಹಣಕಾಸು ನೆರವು ಒದಗಿಸುವವರ ಬಗ್ಗೆ ಮತ್ತು ಕೊರಿಯರ್ ಗಳ ಮೂಲದ ಬಗ್ಗೆಯೂ ಗುಪ್ತಚರ ವಿಭಾಗಕ್ಕೆ ಮಾಹಿತಿ ಕೊಡಬೇಕು. ಹಿಂದೆ ಎಸಗಿದ್ದ ಕ್ರಿಮಿನಲ್ ಅಪರಾಧಗಳ ಮಾಹಿತಿ, ಅದರಲ್ಲಿ ಭಾಗಿಯಾದವರ ವಿವರ, ಸಂಚು ಯೋಜಿಸಿದವರ ವಿವರ, ಬಳಸಿದ ಆಯುಧಗಳ ಮಾಹಿತಿಯನ್ನು ನೀಡಬೇಕಿದೆ. ಅಷ್ಟೇ ಅಲ್ಲದೆ, ಮಾಧ್ಯಮಗಳ ಮುಂದೆ ತಾನಾಗಿಯೇ ಸ್ವ ಇಚ್ಛೆಯಿಂದ ಶರಣಾಗುತ್ತಿದ್ದೇನೆ ಎಂದು ಹೇಳಿಕೆ ನೀಡಬೇಕಿದೆ.
ಸರ್ಕಾರದಿಂದ ಸಿಗುವ ಪ್ಯಾಕೇಜ್ ಏನು?
ಎ ಕೆಟಗರಿ: ನಕ್ಸಲರು ರಾಜ್ಯದವರೇ ಆಗಿ, ಆಕ್ಟೀವ್ ಆಗಿದ್ದು ಕೇಸ್ ಇದ್ದರೆ ಅಂತಹವರಿಗೆ ಎ ಕೆಟಗರಿ ಅಡಿಯಲ್ಲಿ 7.50 ಲಕ್ಷ ರೂಪಾಯಿ ಹಣವನ್ನು ಸರ್ಕಾರ ನೀಡುತ್ತದೆ.
ಬಿ ಕೆಟಗರಿ: ನಕ್ಸಲರು ಹೊರ ರಾಜ್ಯದವರಾಗಿದ್ದು, ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದರೆ ಆತನ ಮೇಲೆ ಒಂದಕ್ಕಿಂತ ಹೆಚ್ಚು ಪ್ರಕರಣಗಳಿದ್ದರೆ ಅಂಥವರಿಗೆ 4 ಲಕ್ಷ ರೂ. ಪ್ಯಾಕೇಜ್ ನೀಡಲಾಗುತ್ತದೆ.
ಸಿ ಕೆಟಗರಿ: ಎಡಪಂಥೀಯ ಭಯೋತ್ಪಾದನಾ ಚಟುವಟಿಕೆ ಬೆಂಬಲಿಸುವ ನಕ್ಸಲರ ಸಂಪರ್ಕ ಹೊಂದಿರುವ ಹಾಗೂ ಪ್ರಕರಣಗಳು ಹೊಂದಿದ್ದರೆ ಅಂತಹವರಿಗೆ 2 ಲಕ್ಷ ರೂಪಾಯಿ ಹಣವನ್ನು ಸರ್ಕಾರ ನೀಡುತ್ತದೆ. ಒಮ್ಮೆಲೆ ಈ ಪ್ಯಾಕೇಜ್ ಹಣ ಪಡೆಯುವಂತಿಲ್ಲ. ಒಟ್ಟು ಮೂರು ಭಾಗಗಳಾಗಿ ಹಣ ಪಡೆಯುತ್ತಾರೆ.
ಇಷ್ಟೇ ಅಲ್ಲದೆ ಶರಣಾಗುವ ನಕ್ಸಲರು ಆಯುಧಗಳನ್ನು ಹಾಜರುಪಡಿಸಿದರೆ ಕೆಟಗರಿ ಹಾಗೂ ಆಯುಧಗಳ ಮೇಲೆ ಹಣ ನೀಡಲಾಗುತ್ತದೆ. ಅಲ್ಲದೇ ಶರಣಾದ ನಕ್ಸಲರ ವ್ಯಾಪಾರ, ವೃತ್ತಿಗೆ ಸರ್ಕಾರ ಸಹಕಾರ ನೀಡುತ್ತದೆ. ನಕ್ಸಲರು ತರಬೇತಿ ಸಂಸ್ಥೆಗೆ ಸೇರಿದ ಬಳಿಕ ವರ್ಷದ ವರೆಗೆ 5,000 ರೂಪಾಯಿ ಹಣ ನೀಡುತ್ತದೆ. ಇಷ್ಟು ಮಾತ್ರವಲ್ಲದೇ ಶರಣಾಗುವ ನಕ್ಸಲರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
Six Naxals, who were active in she forests of Malnad and coastal regions of Karnataka, surrendered before Chief Minister Siddaramaiah Wednesday evening. The surrendered Naxals are Vanajakshi, Mandagaru Latha, Sundari, Mareppa Aroli, K Vasanth and N Jeesha. Barring Jisha and K Vasanth, who are from Kerala and Tamil Nadu respectively, the remaining four are from Raichur, Chikkamagaluru and Dakshina Kannada districts of Karnataka and they were said to be active in the Naxal movement for the past two decades.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm