ಬ್ರೇಕಿಂಗ್ ನ್ಯೂಸ್
15-01-25 09:17 pm HK News Desk ಕರ್ನಾಟಕ
ಬೆಳಗಾವಿ, ಜ.15: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ವಾಹನ ಅಪಘಾತ ಸಂಬಂಧ ಹಿಟ್ ಅಂಡ್ ರನ್ ಪ್ರಕರಣ ಎಂದು ಪರಿಗಣಿಸಿದ್ದೇವೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಅಪಘಾತಕ್ಕೆ ಕಾರಣವಾದ ಕ್ಯಾಂಟರ್ಗೆ ಬಲೆ ಬೀಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಶಿವಪ್ರಸಾದ ಗಂಗಾಧರಯ್ಯ ಅವರು ದೂರು ನೀಡಿದ್ದಾರೆ. ದೂರಿನ ಪ್ರಕಾರ ಆ ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂತು. ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ. ಅದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಗುದ್ದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದರು.
ಪಂಚೆನಾಮೆಗೆ ತೆರಳಿದಾಗ ಅಲ್ಲಿ ಕಾರಿರಲಿಲ್ಲ:
ವಾಹನವನ್ನು ಪಂಚನಾಮೆ ನಡೆಸಲು ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲ್ಲಿ ಕಾರು ಇರಲಿಲ್ಲ. ಸಚಿವರ ಕಡೆಯವರು ಆ ಕಾರನ್ನು ಟೊಯೋಟಾ ಶೋರೂಂಗೆ ಸಾಗಿಸಿದ್ದರು. ಅಲ್ಲಿಯೇ ಹೋಗಿ ನಮ್ಮ ಪೊಲೀಸರು ಪಂಚನಾಮೆ ಮಾಡಿದ್ದಾರೆ. ಇನ್ನು ಕಾರಿನ ಬಲಬದಿಗೆ ಗುದ್ದಿರುವ ನಿಶಾನೆಗಳು ಸಿಕ್ಕಿವೆ. ಕಾರಿಗೆ ತಾಗಿದ ಕ್ಯಾಂಟರ್ಗೆ ಶೋಧಕಾರ್ಯ ಮುಂದುವರಿಸಿದ್ದೇವೆ ಎಂದು ಡಾ. ಭೀಮಾಂಶಕರ ಗುಳೇದ ತಿಳಿಸಿದರು.
ಸಚಿವರ ಜೊತೆಗೆ ಬೆಂಗಾವಲು ವಾಹನ ಇರಲಿಲ್ಲ. ಅಲ್ಲದೇ ಸಚಿವ ಬರುವ ಕುರಿತು ನಮಗೂ ಮಾಹಿತಿ ನೀಡಿರಲಿಲ್ಲ. ಇನ್ನು ಬೇರೆ ವಾಹನಗಳು ಓಡಾಡಲು ಸಮಸ್ಯೆ ಆಗಬಾರದು. ಅದೇ ರೀತಿ ಮತ್ತೆ ಬೇರೆ ಅಪಘಾತಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ಆ ಕಾರನ್ನು ಅಲ್ಲಿಂದ ಅವರೇ ಸಾಗಿಸಿದ್ದಾರೆ. ಅಲ್ಲದೇ ಮೊದಲು ಸಚಿವರು ಸೇರಿದಂತೆ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕವೇ ಆ ಕಾರನ್ನು ಸ್ಥಳಾಂತರಿಸಲಾಗಿದೆ. ಹಾಗಾಗಿ, ಕೂಲಂಕುಶವಾಗಿ ತನಿಖೆ ನಡೆಸಿ ವಸ್ತುಸ್ಥಿತಿ ವರದಿಯನ್ನು ನಾವು ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಎಸ್ಪಿ ಗುಳೇದ ಹೇಳಿದರು.
Superintendent of Police Dr. Bheemashankar S Guled said that the car accident involving Minister Laxmi Hebbalkar was a hit-and-run incident, with another vehicle’s involvement established.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm