ಬ್ರೇಕಿಂಗ್ ನ್ಯೂಸ್
31-01-25 02:02 pm HK News Desk ಕರ್ನಾಟಕ
ಮೈಸೂರು, ಜ 31: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
2 ಲಕ್ಷ ಹಣ ಕಟ್ಟಿ, ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ;
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ:
ಇನ್ನು ಚೆಕ್ ಬೌನ್ಸ್ ಕೇಸ್ನಲ್ಲಿ ಕೋರ್ಟ್ ತೀರ್ಪು ನೀಡಿರೋ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು, ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು ಅಂತ ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೆ, ಈಗ ಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ. ಚೆಕ್ ಬೌನ್ಸ್ ವಿಚಾರವಾಗಿ ನಾನು ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಅಂತ ಸ್ನೇಹಮಯಿ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣದ ದೂರುದಾರರಾಗಿದ್ದಾರೆ.
Cheque bounce case Snehamahi Krishna gets 6 months imprisonment by mysuru court. The court has ordered to pay 2 laksh or jail term of 6 months. Snehamahi stated that he will challenge the order in the high court.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm