ಬ್ರೇಕಿಂಗ್ ನ್ಯೂಸ್
02-02-25 01:43 pm HK News Desk ಕರ್ನಾಟಕ
ಕಲಬುರಗಿ, ಫೆ.2: ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡಿ ಅಚ್ಚರಿ ಮೂಡಿಸಿರುವ ಅಳಂದ ಶಾಸಕ ಬಿ.ಆರ್ ಪಾಟೀಲ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಯಾವತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ರಾಜಿನಾಮೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೆ ವರೆಗೂ ಸಿದ್ದರಾಮಯ್ಯ ಅವರ ಸ್ನೇಹಿತನಾಗಿಯೇ ಉಳಿಯುತ್ತೇನೆ ಎಂದು ಬಿಆರ್ ಪಾಟೀಲ್ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಆರ್ ಪಾಟೀಲ್ ದಿಢೀರ್ ರಾಜೀನಾಮೆ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಏಕಾಏಕಿ ಏಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಅವರು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ.
ಬಿಆರ್ ಪಾಟೀಲ್ ಅವರು ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಯಸಿದ್ದರು. ಸಚಿವ ಸ್ಥಾನ ಸಿಗದೇ ಇದ್ದುದರಿಂದ ಹಿರಿಯ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಇದರ ಜೊತೆಗೆ ಹೆಚ್ಚಿನ ಅನುದಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಕಳೆದ ಬಜೆಟ್ನಲ್ಲಿ ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡದೆ ಇರುವುದಕ್ಕೆ ಬೇಸರಗೊಂಡಿದ್ದರು. ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
BR Patil, senior Congress MLA and a close associate of CM Siddaramaiah, created quite a flutter in the state's political circles Saturday as he resigned from his position as the CM's political adviser. His sudden exit comes at a time when differences within Congress over clamours for changes in the party's state leadership have intensified.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm