ಬ್ರೇಕಿಂಗ್ ನ್ಯೂಸ್
14-02-25 03:44 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14 : ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿವಿಗಳನ್ನು ಮುಚ್ಚಲು ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉಪಸಮಿತಿ ಸದಸ್ಯರು ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಕುರಿತಾಗಿ ಸಭೆ ನಡೆಸಿದರು. ಸಭೆಯಲ್ಲಿ ಆರ್ಥಿಕ ಕೊರತೆ ಮುಂದಿಟ್ಟು ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲ 9 ವಿವಿಗಳನ್ನು ಮುಚ್ಚಲು ನಿರ್ಧಾರ ಕೈಗೊಳ್ಳಲಾಗಿದೆ.
ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ನಿರ್ವಹಣೆ ಉತ್ತಮವಾಗಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯವಾಗುತ್ತದೆ. ಆದ್ದರಿಂದ ಈ ವಿಶ್ವವಿದ್ಯಾಲಯಕ್ಕೆ ಆದಾಯ ಚೆನ್ನಾಗಿರುವುದರಿಂದ ಅದನ್ನು ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ.
ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕಾಗುತ್ತದೆ. ಈಗ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಭೂಮಿ ಅಗತ್ಯವಿದೆ. ಬಹುತೇಕ ವಿಶ್ವವಿದ್ಯಾಲಯಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ. 342 ಕೋಟಿ ಮೊತ್ತದ ಹಣಕಾಸು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲಸೌಕರ್ಯ, ವಾಹನ, ಪೀಠೋಪಕರಣ ಇತರೆ ವಸ್ತುಗಳಿಗಾಗಿ ಬೇಕಾಗುತ್ತದೆ ಎಂದು ಉಪ ಸಮಿತಿ ಅಭಿಪ್ರಾಯ ಪಟ್ಟಿದೆ.
ಹೀಗಾಗಿ ಈಗಾಗಲೇ ತಾತ್ಕಾಲಿಕ ನೆಲೆಯಲ್ಲಿ ಆರಂಭಗೊಂಡಿರುವ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಸದ್ಯದಲ್ಲೇ ಬೀಗ ಬೀಳುವ ಸಾಧ್ಯತೆ ಇದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳ ಭವಿಷ್ಯ ನಮಗೆ ಮುಖ್ಯ. ಉಪನ್ಯಾಸಕರು ಚಾಮರಾಜನಗರ, ಮಂಡ್ಯಗೆ ಹೋಗಲು ತಯಾರಿಲ್ಲ. ಸೀನಿಯಾರಿಟಿಗೆ ತೊಂದರೆಯಾಗುತ್ತೆಂಬ ಆತಂಕ ಅವರಿಗಿದೆ. ಈ ವಿಚಾರವನ್ನು ಸಂಪುಟದ ಮುಂದೆ ಇಡುತ್ತೇನೆ. ಈ ಹಿಂದೆ ಒಂದು ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಮೀಸಲು ಇಡಲಾಗಿತ್ತು. ಈಗ ಹೊಸ ವಿವಿಗೆ ಜಮೀನು ಇಲ್ಲ, ಅಲ್ಲಿಗೆ ಹೋಗುವವರೂ ಇಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಬಂದಿದೆ. ಮುಖ್ಯಮಂತ್ರಿಗಳಿಗೂ ವಿವರಣೆ ನೀಡುತ್ತೇನೆ ಎಂದು ಹೇಳಿದರು.
The Karnataka government has decided to shut down nine out of the ten newly established universities that were set up during the previous BJP government’s tenure. The decision, taken during a Cabinet subcommittee meeting led by Deputy Chief Minister D.K. Shivakumar, was driven by the lack of land availability and financial constraints required to develop infrastructure, sources confirmed on Friday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm