ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm