ಬ್ರೇಕಿಂಗ್ ನ್ಯೂಸ್
27-02-25 05:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಒಣಹುಲ್ಲು ಸುಟ್ಟರೆ ಹೊಸ ಚಿಗುರು ಬರುತ್ತದೆ. ತನ್ನ ಮೇಕೆಗಳಿಗೆ ಮೇವು ಸಿಗುತ್ತದೆಂಬ ದುರಾಲೋಚನೆಯಿಂದ ವ್ಯಕ್ತಿಯೊಬ್ಬ ಅರಣ್ಯ ಪ್ರದೇಶದ ಒಣ ಹುಲ್ಲಿಗೆ ಬೆಂಕಿ ಇಟ್ಟ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
ರಾಜಪ್ಪ (42) ಎಂಬಾತ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳುತ್ತಿದ್ದ. ಅರಣ್ಯದಲ್ಲಿ ಹುಲ್ಲು ಒಣಗಿದ್ದನ್ನು ನೋಡಿದ ಆತ, ಇದನ್ನು ಸುಟ್ಟರೆ ಬೇಗನೆ ಹೊಸ ಹುಲ್ಲು ಚಿಗುರುತ್ತದೆ, ಆಗ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂದು ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಹುಲ್ಲು ಹೊತ್ತಿಕೊಂಡು 10 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಅಗ್ನಿ ಅವಘಡ ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದಾಗಲೇ 10 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳದಲ್ಲೇ ರಾಜಪ್ಪ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಆತ ತಾನೇ ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A misguided attempt to create fresh grass for grazing led to a devastating forest fire in the Sangama Wildlife Sanctuary, Doddalahalli, Kanakapura taluk. A man set dry grass on fire, believing it would promote new growth, but ended up destroying 10 acres of forest land.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm