ಬ್ರೇಕಿಂಗ್ ನ್ಯೂಸ್
07-03-25 01:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.7 : ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು 2025-26ರಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಬಾಣಂತಿ ಮರಣ ತಡೆಗೆ ಮಿಷನ್ ಮೋಡ್
ಬಾಣಂತಿಯರ ಸಾವು ಪ್ರಕರಣದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಹಿಡಿಯಲು ಸರ್ಕಾರ ಮುಂದಾಗಿದೆ. ಶಿಶು ಜನನ ಸಮಯದಲ್ಲಿ ತಾಯಂದಿರ ಮರಣವನ್ನು ತಡೆಗಟ್ಟುವುದು ಅತ್ಯಂತ ಪ್ರಮುಖ ಆರೋಗ್ಯ ಸವಾಲಾಗಿದೆ. ಇದಕ್ಕಾಗಿ ಸರ್ಕಾರ ಮಿಷನ್ ಮೋಡ್ ಕಾರ್ಯಕ್ರಮ ಆರಂಭಿಸುತ್ತಿದ್ದು, 320 ಕೋಟಿ ಅನುದಾನ ಇಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗೆ ಹಿಂದುಳಿದ ಜಿಲ್ಲೆಗಳಿಗೆ ಪೌಷ್ಟಿಕಾಂಶ ಕಿಟ್, ತಾಯಂದಿರಿಗೆ ವಾತ್ಸಲ್ಯ ಕಿಟ್ ಮತ್ತು ಪ್ರೋತ್ಸಾಹ ಧನ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.
ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುವುದು. ಇದಕ್ಕಾಗಿ ಅಲ್ಲಿನ ನೂರು ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ಸಾಲಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ, ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಎಂಸಿಹೆಚ್ ತಜ್ಞರ ನಿಯೋಜನೆ, ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ 150 ಕೋಟಿ ವೆಚ್ಚದಲ್ಲಿ 200 ಹಾಸಿಗೆಯ ಆಸ್ಪತ್ರೆ ನಿರ್ಮಾಣ, ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹಾಗೂ ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಆಸ್ಪತ್ರೆ ನಿರ್ಮಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ ಅನ್ನು ಎಲ್ಲಾ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡುತ್ತಿದ್ದು, ಮಾನಸಿಕ ಆರೋಗ್ಯ ರಕ್ಷಣೆಗಾಗಿ ಸರ್ಕಾರೇತರ ಸಂಸ್ಥೆಗಳ ಬೆಂಬಲದೊಂದಿಗೆ ಜಿಲ್ಲಾಸ್ಪತ್ರೆಗಳಲ್ಲಿ ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ನಗದುರಹಿತ ಚಿಕಿತ್ಸೆ
ಗುತ್ತಿಗೆ, ಹೊರ ಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರಿಗೆ 5 ಲಕ್ಷ ರೂಪಾಯಿ ವರೆಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಒದಗಿಸಲಾಗುವುದು. 3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಮಾಸಿಕ 100 ರೂಪಾಯಿ ಇದಕ್ಕೆ ಪಾವತಿ ಮಾಡಿದರೆ ಸರ್ಕಾರ 200 ರೂಪಾಯಿ ನೀಡುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಆರೋಗ್ಯ ಯೋಜನೆ ವಿಸ್ತರಣೆ
ಆರು ಸಾಂಕ್ರಾಮಿಕವಲ್ಲದ ರೋಗಗಳನ್ನು ಪರೀಕ್ಷಿಸಲು ಮತ್ತು ಚಿಕಿತ್ಸೆ ನೀಡಲು ಕೋಲಾರದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾದ ಗೃಹ ಆರೋಗ್ಯ ಯೋಜನೆಯನ್ನು ಈಗ 100 ಕೋಟಿ ರೂಪಾಯಿ ಹಂಚಿಕೆಯೊಂದಿಗೆ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಯನ್ನು ಹೆಚ್ಚಿಸಲು ಕ್ಯಾನ್ಸರ್ ರೋಗನಿರ್ಣಯ ಘಟಕವನ್ನು ಸ್ಥಾಪಿಸಲಾಗುವುದು.
ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು, ಪ್ರತಿಯೊಂದಕ್ಕೂ 100 ಕೋಟಿ ರೂಪಾಯಿ ಹಂಚಿಕೆ ಮಾಡಲಾಗುವುದು, ಇದು ರಾಜ್ಯದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಂಬ್ಯುಲೆನ್ಸ್ ವ್ಯವಸ್ಥೆ
ಸರ್ಕಾರದ 108 ಆಂಬ್ಯುಲೆನ್ಸ್ ಸೇವೆಗಳನ್ನು ಸುಧಾರಿಸಲು, ಕಮಾಂಡ್ ಕಂಟ್ರೋಲ್ ಸೆಂಟರ್ ಅನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ತರಲಾಗುವುದು, ತುರ್ತು ಪ್ರತಿಕ್ರಿಯೆಗಾಗಿ ಆರೋಗ್ಯ ಕವಚವನ್ನು ಬಲಪಡಿಸಲಾಗುವುದು.
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಕ್ಯಾನ್ಸರ್ ರೋಗ ಹೆಚ್ಚಾಗಿ ಕಾಡುತ್ತಿದ್ದು, ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು, ಗಣಿಗಾರಿಕೆ ಪೀಡಿತ ಪ್ರದೇಶಗಳು ಮತ್ತು ಕಲ್ಯಾಣ ಕರ್ನಾಟಕದ 20 ತಾಲ್ಲೂಕುಗಳಲ್ಲಿ 14 ವರ್ಷದ ಬಾಲಕಿಯರಿಗೆ HPV ಲಸಿಕೆ ಕಾರ್ಯಕ್ರಮವನ್ನು ಮೊದಲ ಹಂತದಲ್ಲಿ ಪ್ರಾರಂಭಿಸಲಾಗುವುದು, ಇದಕ್ಕಾಗಿ 9 ಕೋಟಿ ರೂ. ಹಂಚಿಕೆ ಮಾಡಲಾಗುತ್ತದೆ.
Karnataka Chief Minister Siddaramaiah on Friday announced a Rs 320 crore-mission to bring preventable maternal deaths to zero in the state.Delivering a record 16th budget speech on Friday, he explained that this programme would include distributing nutrition kits, Vatsalya Kits, and financial incentives for pregnant women to prevent anaemia, deploying mother and child health specialists in every taluk hospital, equipping hospitals with equipment and novel technology to treat and prevent postpartum haemorrhage.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm