ಬ್ರೇಕಿಂಗ್ ನ್ಯೂಸ್
07-03-25 02:54 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.7 : ಸಿಎಂ ಸಿದ್ದರಾಮಯ್ಯ ಈ ಬಾರಿ ಮಂಡಿ ನೋವಿನಿಂದಾಗಿ ಕುಳಿತುಕೊಂಡೇ ಬಜೆಟ್ ಭಾಷಣ ಓದಿದ್ದಾರೆ. ಕಳೆದ ಬಾರಿ 2024-25 ರಲ್ಲಿ ದಾಖಲೆ ಎನ್ನುವಂತೆ ಸುದೀರ್ಘ 3 ಗಂಟೆ 15 ನಿಮಿಷಗಳ ಕಾಲ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿ ಆ ದಾಖಲೆಯನ್ನು ಮುರಿದಿದ್ದು ಭರ್ತಿ 3.30 ಗಂಟೆ ಬಜೆಟ್ ಭಾಷಣ ಓದಿದ್ದಾರೆ.
ಈ ಬಾರಿ ಒಟ್ಟು 4.9 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಈ ಪೈಕಿ 1,16,000 ಕೋಟಿ ಸಾಲ ಮಾಡಿರುವುದನ್ನೂ ಸಿದ್ದರಾಮಯ್ಯ ಉಲ್ಲೇಖ ಮಾಡಿದ್ದಾರೆ. ಇದರೊಂದಿಗೆ 2025-26ನೇ ಸಾಲಿನ ಅಂತ್ಯಕ್ಕೆ ರಾಜ್ಯ ಸರ್ಕಾರದ ಒಟ್ಟು ಸಾಲ 7,64,655 ಕೋಟಿ ರೂ.ಗೆ ಏರಿಕೆ ಆಗಲಿದೆ. ರಾಜ್ಯದಲ್ಲಿ ಒಟ್ಟು ತೆರಿಗೆ ಆದಾಯ ಅಂದಾಜು 2,92,477 ಕೋಟಿ ಇದ್ದರೆ, ಈ ಪೈಕಿ ಸ್ವಂತ ತೆರಿಗೆ 2,08,100 ಕೋಟಿ ಮಾತ್ರ ಇರಲಿದೆ. ತೆರಿಗೆ ಆದಾಯದ ಸುಮಾರು ಅರ್ಧಕ್ಕಿಂತ ಹೆಚ್ಚು ಮೊತ್ತವನ್ನು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ರಾಜ್ಯ ಸರ್ಕಾರ, ಈ ವರ್ಷದ ಬಜೆಟ್ ಉದ್ದೇಶಕ್ಕೆ ಸಾಲ ಮಾಡಿದ್ದಾರೆ.
ಈ ಬಾರಿ ಗ್ಯಾರಂಟಿ ಯೋಜನೆ ನಡುವೆಯೂ ಇಲಾಖೆಗಳಿಗೆ ಅನುದಾನ ನೀಡಲು ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ 2025-26 ನೇ ಸಾಲಿನಲ್ಲಿ 40,000 ಕೋಟಿ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ 51,300 ಕೋಟಿ ರೂ. ಅನುದಾನ ಇಡಲಾಗಿದೆ. ಉಳಿದಂತೆ, ಪ್ರಮುಖವಾಗಿ ಶಿಕ್ಷಣ ಇಲಾಖೆ 45,286 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ಆರೋಗ್ಯ17, 473 ಕೋಟಿ, ಕಂದಾಯ ಇಲಾಖೆಗೆ 17,201 ಕೋಟಿ, ಸಮಾಜ ಕಲ್ಯಾಣಕ್ಕೆ 16,955 ಕೋಟಿ ಮೊತ್ತ ತೆಗೆದಿಡಲಾಗಿದೆ.
ಬೆಂಗಳೂರಿಗೆ 11 ಡಿಸಿಪಿ ವಿಭಾಗ
ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗಿದೆ. ಪೊಲೀಸ್ ವ್ಯವಸ್ಥೆ ಚುರುಕಾಗಿಸಲು ಎಂಟು ಪೊಲೀಸ್ ವಿಭಾಗಗಳ ಸಂಖ್ಯೆಯನ್ನು 11 ಕ್ಕೆ ಏರಿಸಲಾಗಿದೆ. ಅಲ್ಲದೆ, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗ ಬಲಗೊಳಿಸಲು 5 ಕೋಟಿ ಒದಗಿಸಲಾಗಿದೆ.
ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಅನುದಾನ ಘೋಷಿಸಲಾಗಿದೆ.
ಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಪೀಠೋಪಕರಣ ಒದಗಿಸಲು 50 ಕೋಟಿ ರೂ. ಬಿಡುಗಡೆ. ಮಧ್ಯಾಹ್ನ ಉಪಹಾರ ಯೋಜನೆಯಡಿ 16,347 ಶಾಲೆಗಳ ಅಡುಗೆಮನೆ ನವೀಕರಣ ಹಾಗೂ ಪಾತ್ರೆ ಪರಿಕರ ಪೂರೈಕೆಗೆ 46 ಕೋಟಿ ರೂ. ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್. ಶಾಲೆಗಳನ್ನಾಗಿ ಕಲ್ಯಾಣ ಕರ್ನಾಟಕ ಭಾಗದ 50 ಶಾಲೆಗಳ ಉನ್ನತೀಕರಣಕ್ಕೆ ಅನುದಾನ ಮೀಸಲಿಡಲಾಗಿದೆ.
ಜಾನುವಾರು ಸಾವಿಗೆ ಪರಿಹಾರ ಹೆಚ್ಚಳ
ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.
ರಾಜ್ಯದ ಮಲ್ಟಿಪ್ಲೆಕ್ಸ್ ಗಳಿಗೂ ಸೇರಿದಂತೆ ಎಲ್ಲಾ ಚಿತ್ರ ಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ 200 ರೂ. ಸೀಮಿತಗೊಳಿಸುವ ಘೋಷಣೆ ಮಾಡಲಾಗಿದೆ. ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆ ಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
Chief Minister Siddaramaiah, who holds the Finance portfolio, is all set to present his record 16th Budget on March 7, 2025. The size of the budget is expected to touch ₹4 lakh crore, up from the ₹3.71 lakh crore outlay last year. The year’s first session of the legislature, which began on March 3, commenced with the address by Governor Thaawarchand Gehlot to a joint session of the State legislature.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm