ಬ್ರೇಕಿಂಗ್ ನ್ಯೂಸ್
07-03-25 09:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 07: ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯ ಬಜೆಟ್ನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಇದೊಂದು 'ಹಲಾಲ್ ಬಜೆಟ್', ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದೆ.
ಬಜೆಟ್ನಲ್ಲಿ ಮುಸ್ಲಿಂಮರಿಗೆ ಹೆಚ್ಚಿನ ಘೋಷಣೆ ಮಾಡಲಾಗಿದ್ದು, ಈ ಕುರಿತು ಬಿಜೆಪಿ ಪಟ್ಟಿ ಮಾಡಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮುಸ್ಲಿಮರ ಸರಳ ಮದುವೆಗೆ ₹50 ಸಾವಿರ, ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯಕ್ಕೆ ₹150 ಕೋಟಿ, ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ₹50 ಲಕ್ಷ, ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ, KEA ಅಡಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ ಕಡಿತ, ಉಲ್ಲಾಳದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು, ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ, ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದೆ.

ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಅಂಬೇಡ್ಕರ್ ಆಶಯಗಳಿಗೆ ವಿರುದ್ಧ: ಬಿಜೆಪಿ
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೋಗಸ್ ಬಜೆಟ್ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು!! ಕಾಂಗ್ರೆಸ್ ಪಕ್ಷಕ್ಕೆ ಬಾಬಾ ಸಾಹೇಬರ ಮೇಲೆ ಎಷ್ಟು ದ್ವೇಷವಿದೆ ಎಂಬುದು ಸಿದ್ದರಾಮಯ್ಯ ಅವರ ಸಂವಿಧಾನ ವಿರೋಧಿ ಬಜೆಟ್ನಿಂದ ಮತ್ತೊಮ್ಮೆ ಜಗಜ್ಜಾಹೀರಾಗಿದೆ ಎಂದು ಮಗದೊಂದು ಪೋಸ್ಟ್ನಲ್ಲಿ ಬಿಜೆಪಿ ಆರೋಪಿಸಿದೆ.
ಮನಸ್ಸಿನ ಕೊಳಕು ಭಾವನೆ ಹೊರ ಬಂದಿದೆ, ಸಿದ್ದು ಗರಂ ;
ಬಿಜೆಪಿಯವರು ಹಲಾಲ್ ಬಜೆಟ್ ಅಂತಾರೆ. ಆ ಮೂಲಕ ಮನಸ್ಸಿನ ಕೊಳಕು ಭಾವನೆ ಹೊರ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳು ಎಸ್ ಸಿಎಸ್ಪಿ ಟಿಎಸ್ಪಿ ಕಾಯ್ದೆ ಮಾಡಿರುವುದು ತೋರಿಸಲಿ. ಕೇಂದ್ರಕ್ಕೆ ಕೇಳುವ ಧೈರ್ಯ ಬಿಜೆಪಿಯವರಿಗೆ ಇಲ್ಲ. ಅವರಿಗೆ ಯಾವ ನೈತಿಕ ಹಕ್ಕು ಇದೆ? ಎಂದು ಪ್ರಶ್ನಿಸಿದರು. ನಾವು ಸಮಾನತೆಯಲ್ಲಿ ನಂಬಿಕೆ ಇಟ್ಟವರು. ಪಾಕಿಸ್ತಾನ ಬಜೆಟ್ ಅನ್ನುವುದು ಅವರು ಜಾತ್ಯಾತೀತ ವಿರೋಧಿಗಳು ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.
ಧರ್ಮ- ಜಾತಿ ನೋಡಲು ಆಗಲ್ಲ:ಒಂದು ಧರ್ಮವನ್ನು, ಜಾತಿಯನ್ನು ನೋಡಲು ಆಗಲ್ಲ. ಜಾತ್ಯಾತೀತವಾದಕ್ಕೆ ಅವರು ವಿರೋಧಿಗಳಾಗಿದ್ದಾರೆ. ಸಂವಿಧಾನ ವಿಚಾರಕ್ಕೆ ಅವರು ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಸಂಕುಚಿತ ಮನೋಭಾವನೆ ಇರುವವರು. ನಾವು ಧರ್ಮದ ಆಧಾರದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿಲ್ಲ. ಅವರಿಗೆ ಮುಸ್ಲಿಂರನ್ನು ವಿರೋಧಿಸುವುದೇ ರಾಜಕೀಯ ನಿಲುವು ಆಗಿದೆ. ಸರ್ವರಿಗೆ ಸಮಪಾಲು ಎಲ್ಲರಿಗೂ ಸಿಕ್ಕಿಲ್ಲ. ಆ ದಿಕ್ಕಿನಲ್ಲಿ ನಾವು ನಡೆಯುತ್ತಿದ್ದೇವೆ ಎಂದು ತಿಳಿಸಿದರು.
The Bharatiya Janata Party on Friday launched a scathing attack on the ruling Congress in Karnataka after Chief Minister Siddaramaiah presented his record 16th Budget. The BJP said that appeasement is at its peak in the Congress regime. Taking to X, BJP listed out measures announced in the budget, especially for the Muslim community including reservations for Muslim contractors.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm