ಬ್ರೇಕಿಂಗ್ ನ್ಯೂಸ್
09-03-25 04:54 pm Headline Karnataka Staff ಕರ್ನಾಟಕ
ಚಿತ್ರದುರ್ಗ, ಮಾ 09: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ನಗರ ಮೂಲದವರಾಗಿದ್ದಾರೆ. ಘಟನೆಯಲ್ಲಿ ರುದ್ರಸ್ವಾಮಿ (60), ಮಲ್ಲಿಕಾರ್ಜುನ (50), ಶಾಂತಮೂರ್ತಿ (55) ಹಾಗೂ ಚಿದಂಬರಾಚಾರ್ (52) ಹಾಗೂ ಮತ್ತೋರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಘಟನೆಗೆ ಮೂಲ ಕಾರಣ ಏನೆಂದು ಪರಿಶೀಲಿಸಿದಾಗ, ಇನ್ನೋವಾ ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ'' ಎಂದು ಮಾಹಿತಿ ನೀಡಿದರು
''ಮೃತರೆಲ್ಲರೂ ಬೆಳಗಾವಿಯ ಸವದತ್ತಿ ದೇವಸ್ಥಾನಕ್ಕೆ ಹೋಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯದ ಪ್ರಸಾದ ಕಂಡುಬಂದಿದೆ. ಹೀಗಾಗಿ, ದೇವಸ್ಥಾನಕ್ಕೆ ಹೋಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ'' ಎಂದು ಎಸ್ಪಿ ತಿಳಿಸಿದರು.
Five people were killed in a head-on collision between a car and a truck on the outskirts of the district headquarter town of Chitradurga on Sunday.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm