ಬ್ರೇಕಿಂಗ್ ನ್ಯೂಸ್
11-03-25 02:27 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧಿಸಿ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸಿದೆ. ಇದಲ್ಲದೆ, ಐಜಿಪಿ ಅಧಿಕಾರಿಯ ಪ್ರೋಟೊಕಾಲ್ ದುರುಪಯೋಗ ಆಗಿದೆಯೆಂಬ ಆರೋಪದ ಬಗ್ಗೆ ಸಿಐಡಿ ತನಿಖೆಗೆ ಆದೇಶ ಮಾಡಲಾಗಿದೆ. ಇದರಿಂದಾಗಿ ಐಜಿಪಿ ರಾಮಚಂದ್ರ ರಾವ್ಗೆ ಸಂಕಷ್ಟ ಶುರುವಾಗಿದೆ.
ರಾಮಚಂದ್ರರಾವ್ಗೆ ಕೊಟ್ಟಿದ್ದ ಪ್ರೋಟೋಕಾಲ್ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ. ಹೀಗಾಗಿ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಮಚಂದ್ರ ರಾವ್ ಅವರನ್ನು ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸಿದೆ. ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ನೆರವನ್ನು ನೀಡಲು ಡಿಜಿಪಿ ಅಲೋಕ್ ಮೋಹನ್ಗೆ ಸೂಚನೆ ನೀಡಲಾಗಿದ್ದು, ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಇದಲ್ಲದೆ, ಪ್ರೋಟೋಕಾಲ್ ಉಲ್ಲಂಘನೆಯಲ್ಲಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ. ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಓರ್ವ ಪ್ರೋಟೋಕಾಲ್ನ ಹೆಡ್ ಕಾನ್ಸ್ಟೇಬಲ್, ಇನ್ನೊಬ್ಬ ಗುಪ್ತಚರ ಇಲಾಖೆ ಕಾನ್ಸ್ಟೇಬಲ್ ಆಗಿದ್ದು ಇವರೀಗ ತನಿಖೆ ಎದುರಿಸಬೇಕಾಗಿದೆ. ರನ್ಯಾ ರಾವ್ ಏರ್ಪೋರ್ಟ್ಗೆ ಬಂದಾಗಲೆಲ್ಲ ಪಾಳಿಯಲ್ಲಿ ಈ ಇಬ್ಬರೂ ಇರುತ್ತಿದ್ದರು ಎನ್ನಲಾಗಿದೆ.
ಇದೇ ವೇಳೆ, ರನ್ಯಾ ರಾವ್ ಗೆಳೆಯನಾಗಿರುವ ಬೆಂಗಳೂರಿನ ಸ್ಟಾರ್ ಹೊಟೇಲ್ ಮಾಲಕರ ಪುತ್ರ ತರುಣ್ ರಾಜ್ನನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈನಲ್ಲಿ ರನ್ಯಾ ಜೊತೆ ತರುಣ್ ರಾಜ್ ಸ್ನೇಹದಲ್ಲಿದ್ದ ಬಗ್ಗೆ ಡಿಆರ್ಐಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ತರುಣ್ರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ತರುಣ್ ರಾಜ್ಗೆ ಫುಲ್ ಡ್ರಿಲ್ ಮಾಡಿದ್ದಾರೆ. ಇದಲ್ಲದೆ, ಕೋರ್ಟಿನಲ್ಲಿ ಹಾಜರುಪಡಿಸಿ ಐದು ದಿನಗಳ ಕಾಲ ಕಸ್ಟಡಿ ಪಡೆದಿದ್ದಾರೆ.
Slammed by political detractors for turning a blind eye to the gold smuggling racket busted by Director of Revenue Intelligence (DRI) sleuths, home minister G Parameshwara Monday said the state govt will initiate a probe into the alleged misuse of police protocol services at Kempegowda International Airport (KIA).
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm