ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm