ಬ್ರೇಕಿಂಗ್ ನ್ಯೂಸ್
15-03-25 12:33 pm HK News Desk ಕರ್ನಾಟಕ
ಹಾಸನ, ಮಾ 15: ಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆ ಬಲಿಯಾಗಿದ್ದು, ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 4ನೇ ಘಟನೆ ಇದಾಗಿದೆ. ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಸುಶೀಲಮ್ಮ (63) ಮೃತ ಮಹಿಳೆ. 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ಕನೇ ಬಲಿ ಆಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ಕಾಲಿನಿಂದ ತಲೆಯನ್ನು ತುಳಿದು ಸಾಯಿಸಿದೆ. ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಚೀಕನಹಳ್ಳಿ-ಬೇಲೂರು ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸುವಂತೆ ಆಗ್ರಹಿಸಿದರಲ್ಲದೇ, ಅರಣ್ಯ ಸಚಿವರು ಬರುವವರೆಗೂ ಶವ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಪ್ರತಿಭಟನೆ ವೇಳೆ ಸಾರಿಗೆ ಬಸ್ ಚಾಲನೆಗೆ ಮುಂದಾದ ಚಾಲಕನ ವಿರುದ್ಧ ಹರಿಹಾಯ್ದ ಪ್ರತಿಭಟನಾಕಾರರು ಬಸ್ ಮುಂದೆ ಹೋಗದಂತೆ ತಡೆದು ಟೈರ್ಗೆ ಬೆಂಕಿ ಹಚ್ಚಿ ರಸ್ತೆಯಲ್ಲಿ ಧರಣಿ ಕುಳಿತು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ರಸ್ತೆಯಲ್ಲೇ ಕುಳಿತು ನೂರಾರು ಮಂದಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರಾತ್ರಿ 10ಗಂಟೆಯಾದರೂ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
A woman died after she was attacked by a wild elephant at Bommenahalli in Arehalli hobli of Belur taluk in Hassan district on Friday. Susheelamma, 47, encountered the wild elephant while she was working in an estate. The animal trampled her to death. This is the fourth death in elephant attacks in Hassan district this year. Following the incident, police and officers of the Forest Department rushed to the spot.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm