ಬ್ರೇಕಿಂಗ್ ನ್ಯೂಸ್
18-03-25 11:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18 : ಗಡಿಭಾಗದಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು, ಖಾಸಗಿ ಕ್ಷೇತ್ರಗಳಲ್ಲು ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಕನ್ನಡಿಗರ ಮೇಲೆ ಪರಭಾಷಿಕರ ದಾಳಿ ನಿಲ್ಲಿಸ ಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ಇದೇ ಮಾ.22ರಂದು ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕರ್ನಾಟಕ ಬಂದ್ಗೆ ಸಂಬಂಧಿಸಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಸಭೆ ನಡೆಸಿದ್ದು ಹಲವು ಕನ್ನಡಪರ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್, ಅಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೂ ಕರ್ನಾಟಕ ಬಂದ್ ನಡೆಸಲಾಗುವುದು. ಬೆಳಗ್ಗೆ 10:30ಕ್ಕೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಬಂದ್ ಹಿಂಪಡೆಯುವುದಿಲ್ಲ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ. ಈ ಬಂದ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಬಹುತೇಕ ಕನ್ನಡ ಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಆಟೋ ಚಾಲಕರ ಸಂಘಟನೆಗಳು, ಕ್ಯಾಬ್, ಒಲಾ, ಉಬರ್, ಹೋಟೆಲ್ ಮಾಲೀಕರು ಸೇರಿ ಎಲ್ಲರೂ ಬಂದ್ಗೆ ಬೆಂಬಲ ನೀಡಬೇಕು. ನಮ್ಮ ಮೆಟ್ರೋ, ಮಾಲ್ಗಳೂ ಬಂದ್ ಆಗಬೇಕು. ಇಲ್ಲದಿದ್ದರೇ ನಾವೇ ಬಂದ್ ಮಾಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರಲ್ಲದೇ ಕರ್ನಾಟಕ ಬಂದ್ಗೆ ನಮ್ಮದು ನೈತಿಕ ಬೆಂಬಲ ಅನ್ನುವವರು ಮನೆಯಲ್ಲೇ ಕುಳಿತುಕೊಳ್ಳಿ ಎಂದು ಹೇಳಿದರು.
ರಾಜ್ಯದಲ್ಲಿ ದಿನೇ ದಿನೇ ಕನ್ನಡಿಗರ ಮೇಲೆ ಪರಭಾಷಿಗರ ದಾಳಿ ಹೆಚ್ಚಾಗುತ್ತಿದೆ. ಬೆಂಗಳೂರು, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದೆ. ಬಿಹಾರ, ಬಂಗಾಳ, ತಮಿಳು, ತೆಲುಗು, ಮಾರ್ವಾಡಿಯವರು ರಾಜ್ಯದಲ್ಲಿ ಸುಮಾರು 2 ಕೋಟಿ ಜನ ಇದ್ದಾರೆ. ತಲೆಬೋಳಿಸೋದ್ರಿಂದ ಹಿಡಿದು ಪಾನಿಪುರಿ ಮಾರೋನು ಕೂಡ ಅನ್ಯ ರಾಜ್ಯದವರಿದ್ದಾರೆ. ಇದನ್ನೆಲ್ಲ ಯಾರು ಕೇಳೋದು? ಇದೆಲ್ಲದರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಎಂಇಎಸ್, ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು. ಬೆಳಗಾವಿ ನಮ್ಮದು. ಬೆಳಗಾವಿಯಲ್ಲಿ ಶಿವಾಜಿ, ಸಂಭಾಜಿ ಪ್ರತಿಮೆ ಬೇಕಾ? ಪರಭಾಷಿಗರು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿದ್ದು ಕನ್ನಡಿಗರ ಮೇಲೆ ಹಲ್ಲೆ ನಡೆಸುವವರು ರಾಜ್ಯ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.
Pro-Kannada organisations have called for a Karnataka bandh on March 22 to protest the recent assault on a bus crew and the "brazen violence" by pro-Marathi activists
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm